ವಿಶ್ವವಿದ್ಯಾಲಯದಲ್ಲಿ ಭೀಕರ ಗುಂಡಿನ ದಾಳಿ – 15 ಮಂದಿ ಸಾವು

ಪ್ರೇಗ್ನ ಚಾರ್ಲ್ಸ್ ವಿಶ್ವವಿದ್ಯಾಲಯದಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ 15 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ಪ್ರೇಗ್ನ ಚಾರ್ಲ್ಸ್ ವಿಶ್ವವಿದ್ಯಾಲಯದ ಆವರಣಕ್ಕೆ ಬಂದೂಕುಧಾರಿಯೊಬ್ಬ ಆಗಮಿಸಿ, ಗುಂಡಿನ ದಾಳಿ ನಡೆಸಿದ್ದಾರೆ. ಮನಬಂದಂತೆ ಗುಂಡುಹಾರಿಸಿ 15 ಮಂದಿಯನ್ನು ಹತ್ಯೆ ಮಾಡಿದ್ದಾನೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ಬಂದೂಕುಧಾರಿಯನ್ನು ಸ್ಥಳದಲ್ಲಿಯೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಜಮ್ಮುಕಾಶ್ಮೀರದ ಪೂಂಚ್ನಲ್ಲಿ ಉಗ್ರರ ದಾಳಿ – ಹುತಾತ್ಮರ ಸಂಖ್ಯೆ 5 ಕ್ಕೆ ಏರಿಕೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಜೆಕ್ ಪೊಲೀಸರು, ಜನ್ ಪಲಾಚ್ ಚೌಕ್ನಲ್ಲಿರುವ ಚಾರ್ಲ್ಸ್ ವಿಶ್ವವಿದ್ಯಾಲಯದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಬಂದೂಕುಧಾರಿ ಕಟ್ಟಡದಲ್ಲೇ ಇದ್ದಾನೆ. ಯಾರು ಕೂಡ ತಮ್ಮ ಕೊಠಡಿಯಿಂದ ಹೊರಬರಬೇಡಿ ಎಂದು ಕಲಾ ವಿಭಾಗದ ಭೋದಕರಿಗೆ ಇಮೇಲ್ ರವಾನೆಯಾಗಿತ್ತು ಎಂದು ಬರೆದುಕೊಂಡಿದ್ದಾರೆ.
ಬಂದೂಕುಧಾರಿ ಮೊದಲಿಗೆ ತನ್ನ ತಂದೆಯನ್ನು ಕೊಲೆ ಮಾಡಿದ್ದು, ಬಳಿಕ ವಿಶ್ವವಿದ್ಯಾಲಯದಲ್ಲಿ15 ಮಂದಿಯನ್ನು ಹತ್ಯೆ ಮಾಡಿದ್ದಾನೆ. ಆರೋಪಿ ಗುಂಡು ಹಾರಿಸಿಕೊಂಡು ಸತ್ತಿದ್ದಾನ ಅಥವಾ ಆತನನ್ನು ಅಧಿಕಾರಿಗಳು ಹತ್ಯೆ ಮಾಡಿದ್ದಾರಾ ಎಂಬುದರ ಬಗ್ಗೆ ತಿಳಿಯಬೇಕಿದೆ. ವಿಶ್ವವಿದ್ಯಾಲಯದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.