ತೀವ್ರ ರಕ್ತಸ್ರಾವದಿಂದ ನರಳುತ್ತಿರುವ ಶ್ರೇಯಸ್ ಅಯ್ಯರ್ – ಸಿಡ್ನಿ ಆಸ್ಪತ್ರೆಯಲ್ಲಿ ICUನಲ್ಲಿ ಮುಂದುವರಿದ ಚಿಕಿತ್ಸೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹಿಡಿದಿರೋ ಕ್ಯಾಚ್ ನೋಡಿ ಎಂಥಾ ಅದ್ಫುತ ಕ್ಯಾಚ್ ಅಂತಾ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದ್ದರು. ಇದೀಗ ಇದೇ ಕ್ಯಾಚ್ ನಿಂದಾಗಿ ಶ್ರೇಯಸ್ ಅಯ್ಯರ್ ಗಂಭೀರ ಗಾಯಗೊಂಡಿದ್ದಾರೆ. ಆಸ್ಪತ್ರೆ ಸೇರಿರುವ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಸೋಲಿಲ್ಲದ ಸೂರ್ಯನಿಗೆ AUS ಸವಾಲ್ – ODI ಸೋಲು.. T-20I ಸರಣಿನೂ ಕಷ್ಟ?
ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವಾಗ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಅವರನ್ನು ಐಸಿಯುನಲ್ಲಿರಿಸಲಾಗಿದೆ ಎಂದು ವರದಿಯಾಗಿದೆ. ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ಕಾರಣದಿಂದಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ಅಯ್ಯರ್ ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಅಲ್ಲದೆ ಮುಂದಿನ 48 ಗಂಟೆಗಳಲ್ಲಿ ರಕ್ತಸ್ರಾವ ಕಡಿಮೆಯಾಗದಿದ್ದರೆ, ಚಿಕಿತ್ಸೆಗೆ ಬೇರೆ ವ್ಯವಸ್ಥೆ ಮಾಡಬೇಕಾಗುತ್ತದೆ ಎಂಬ ಮಾಹಿತಿ ಹೊರಬಿದ್ದಿದೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟು ಬಿದ್ದಿದೆ. ಈ ಹೊಡೆತದ ನೋವಿನಿಂದ ನರಳಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಕ್ಷಣವೇ ವೈದ್ಯರಲ್ಲಿಗೆ ಕರೆದೊಯ್ಯಲಾಗಿತ್ತು. ಇದೀಗ ಸಿಡ್ನಿಯಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯವು ಗಂಭೀರವಾಗಿರುವ ಕಾರಣ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

ನೋಡಿರಿ

