ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರ – ಐಸಿಯುನಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರ – ಐಸಿಯುನಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರ

ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರವಾಗಿದೆ. ಶ್ರೇಯಸ್ ಅಯ್ಯರ್ ಚೇತರಿಸಿಕೊಂಡಿದ್ದು, ವೈದ್ಯರು ಐಸಿಯುನಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ:ತೀವ್ರ ರಕ್ತಸ್ರಾವದಿಂದ ನರಳುತ್ತಿರುವ ಶ್ರೇಯಸ್ ಅಯ್ಯರ್ – ಸಿಡ್ನಿ ಆಸ್ಪತ್ರೆಯಲ್ಲಿ ICUನಲ್ಲಿ ಮುಂದುವರಿದ ಚಿಕಿತ್ಸೆ

ಶ್ರೇಯಸ್ ಅಯ್ಯರ್ ಆರೋಗ್ಯ ಸುಧಾರಿಸುತ್ತಿದೆ ಎಂದು ಸಿಡ್ನಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಎಡ ಪಕ್ಕೆಲುಬಿನ ಕೆಳಭಾಗದಲ್ಲಿ ಆಂತರಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಅಯ್ಯರ್ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದ ಅಯ್ಯರ್ ಅವರನ್ನು ಸಿಡ್ನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಯ್ಯರ್ ಅವರ ಗಾಯ ಎಷ್ಟು ಗಂಭೀರವಾಗಿತ್ತೆಂದರೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಶ್ರೇಯಸ್ ಅಯ್ಯರ್ ಅವರ ಗಾಯದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಅವರನ್ನು ಐಸಿಯುನಿಂದ ಜನರಲ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಅವರ ಸ್ಥಿತಿ ಗಂಭೀರವಾಗಿದೆಯಾದರೂ ಅವರ ಆರೋಗ್ಯ ಸ್ಥಿರವಾಗಿದೆ. ಅಯ್ಯರ್ ಅವರ ಸ್ಥಿತಿ ಸುಧಾರಿಸುತ್ತಿದ್ದು, ಅವರನ್ನು ಈಗ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ವರದಿಗಳ ಪ್ರಕಾರ, ಅಯ್ಯರ್ ಅಪಾಯದಿಂದ ಪಾರಾಗಿದ್ದು, ಅವರ ಕೆಲವು ಸ್ನೇಹಿತರು ಅವರೊಂದಿಗೆ ಆಸ್ಪತ್ರೆಯಲ್ಲಿ ಇದ್ದಾರೆ. ಇದಲ್ಲದೆ, ವೀಸಾ ಔಪಚಾರಿಕತೆಗಳು ಪೂರ್ಣಗೊಂಡ ನಂತರ ಕುಟುಂಬದ ಸದಸ್ಯರು ಮುಂಬೈನಿಂದ ಸಿಡ್ನಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಸಧ್ಯಕ್ಕೆ ಸಿಕ್ಕಿರುವ ಮಾಹಿತಿಯ ಪ್ರಕಾರ ಅಯ್ಯರ್ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಸಿಡ್ನಿಯಲ್ಲಿಯೇ ಇರಲಿದ್ದು, ಇನ್ನೂ ಕೆಲವು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ.

Sulekha