ಶ್ರೇಯಸ್ ಅಯ್ಯರ್ ಗುಲ್ಮ(ಪಕ್ಕೆಲುಬಿನ ಮೇಲ್ಭಾಗದ ಅಂಗ) ಛಿದ್ರ – ಸಿಡ್ನಿ ಆಸ್ಪತ್ರೆಯಲ್ಲಿ ಆಪರೇಷನ್ ಸಕ್ಸಸ್

ಶ್ರೇಯಸ್ ಅಯ್ಯರ್ ಗುಲ್ಮ(ಪಕ್ಕೆಲುಬಿನ ಮೇಲ್ಭಾಗದ ಅಂಗ) ಛಿದ್ರ – ಸಿಡ್ನಿ ಆಸ್ಪತ್ರೆಯಲ್ಲಿ ಆಪರೇಷನ್ ಸಕ್ಸಸ್

ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರವಾಗಿದೆ. ಸಿಡ್ನಿಯಲ್ಲಿ ನಡೆದ ಸರ್ಜರಿ ಸಕ್ಸಸ್ ಆಗಿದೆ. ಶ್ರೇಯಸ್ ಅಯ್ಯರ್ ಅವರ ಹೆತ್ತವರು ಕೂಡಾ ಮಗನ ಆರೋಗ್ಯದ ಕುರಿತು ಮಾಹಿತಿ ನೀಡಿದ್ದು, ಮಗನ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರ – ಐಸಿಯುನಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸರ್ಜರಿ ಬಳಿಕ ಅಯ್ಯರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅಲ್ಲದೆ ಇದೀಗ ಅವರನ್ನು ಐಸಿಯುನಿಂದ ವಾರ್ಡ್​​ಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ. ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಇದರಿಂದಾಗಿ ಅವರು ಅಸ್ವಸ್ಥರಾಗಿದ್ದರು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಸರ್ಜರಿಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದು, ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೇಯಸ್ ಅಯ್ಯರ್ ಆಪ್ತರು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿರುವುದರಿಂದ ಅಯ್ಯರ್ ಅವರಿಗೆ ಕನಿಷ್ಠ ಐದು ದಿನಗಳು, ಬಹುಶಃ ಒಂದು ವಾರದವರೆಗೆ ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಶ್ರೇಯಸ್ ಅಯ್ಯರ್ ಅವರ ಹೆತ್ತವರು ಸಿಡ್ನಿಗೆ ಪ್ರಯಾಣ ಬೆಳೆಸಿಲ್ಲ ಅನ್ನೋ ಮಾಹಿತಿ ಹೊರಬಿದ್ದಿದೆ. ಜೊತೆಗೆ ಶ್ರೇಯಸ್ ತಂದೆ ಸಂತೋಷ್ ಅಯ್ಯರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಅತ್ಯುತ್ತಮ ವೈದ್ಯರಿಂದ ಮಗನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಾರ ಕೊನೆಗೊಳ್ಳುವ ಮೊದಲೇ ಶ್ರೇಯಸ್​ ಅಯ್ಯರ್ ಅವರು ಆಸ್ಪತ್ರೆಯಿಂದ ಹೊರ ಬರುತ್ತಾರೆ. ಬಿಸಿಸಿಐ ಶ್ರೇಯಸ್​ ಅಯ್ಯರ್ ಜೊತೆ ನಿಕಟ ಸಂಪರ್ಕದಲ್ಲಿ ಇರುವುದರಿಂದ ನಾವು ಆಸ್ಟ್ರೇಲಿಯಾಕ್ಕೆ ಹೋಗುವುದಿಲ್ಲ. ಮಗ ಹೇಗೆ ಹೋಗಿದ್ದನೋ ಹಾಗೇ ಬರುತ್ತಾನೆ ಎಂದು ಅವರ ತಂದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Sulekha