ತಿರುಪತಿಯಲ್ಲಿ ಮದುವೆ ಆಗುವವರಿಗೆ ಗುಡ್‌ನ್ಯೂಸ್‌ –  ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ!

ತಿರುಪತಿಯಲ್ಲಿ ಮದುವೆ ಆಗುವವರಿಗೆ ಗುಡ್‌ನ್ಯೂಸ್‌ –  ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ!

ತಿರುಪತಿಯಲ್ಲಿ ಮದುವೆ ಆಗ್ಬೇಕು ಅಂತ ಅಂದುಕೊಂಡವರಿಗೆ ರಾಜ್ಯದ ಮುಜರಾಯಿ ಇಲಾಖೆ ಗುಡ್‌ನ್ಯೂಸ್‌ ಕೊಟ್ಟಿದೆ. ತಿರುಪತಿಯಲ್ಲಿ ಕರ್ನಾಟಕರ ಭಕ್ತರಿಗಾಗಿ ಕಲ್ಯಾಣ ಮಂಟಪ ನಿರ್ಮಿಸಲಾಗಿದೆ. ಇದೀಗಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ ಸೇವೆಗೆ ಸಿದ್ಧವಾಗಿದ್ದು, ತಿರುಮಲ ಕಲ್ಯಾಣ ಮಂಟಪದಲ್ಲಿ ಕರ್ನಾಟಕದ ಜೋಡಿಯ ಮೊದಲ ಮದುವೆ ಆಗುತ್ತಿದೆ.

ಇದನ್ನೂ ಓದಿ: ಭಾರತ ಗೆದ್ರೂ ಟ್ರೋಫಿ ಇಂಗ್ಲೆಂಡ್ ಪಾಲು – ಇಕ್ಕಟ್ಟಿನಲ್ಲಿ ಟೀಂ ಇಂಡಿಯಾ

ಕರ್ನಾಟಕದ ಮುಜರಾಯಿ ಇಲಾಖೆ ತಿರುಪತಿಯಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿತ್ತು. ಕಳೆದ ತಿಂಗಳು ತಿರುಮಲದಲ್ಲಿ ರಾಜ್ಯ ಮುಜರಾಯಿ ಇಲಾಖೆ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿತ್ತು. ಈಗ ಈ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ ಇಂದು ನಡೆಯುತ್ತಿದೆ. ಕರ್ನಾಟಕ ರಾಜ್ಯದ ಜೋಡಿಗಳ ಮೊದಲ ಮದುವೆ ನಡೆಯುತ್ತಿದೆ. ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆಗಾಗಿ ರಾಜ್ಯದ ವಿವಿಧ ಜಿಲ್ಲೆಯ 8 ಜೋಡಿ ಮದುವೆಗೆ ಬುಕ್ಕಿಂಗ್ ಮಾಡಿದ್ದಾರೆ.

ಇನ್ನೂ ನೂತನವಾಗಿ ಇರುವ ಕಲ್ಯಾಣ ಮಂಟಪದಲ್ಲಿ 36 ಕೊಠಡಿಗಳು ಇದ್ದು, 500 ಆಸನದ ವ್ಯವಸ್ಥೆ ಇದೆ. ಒಂದು ಮದುವೆಗೆ ಜಿಎಸ್‌ಟಿ ಸೇರಿಸಿ ಮೂರುವರೆ ಲಕ್ಷ ರೂ. ಆಗಲಿದೆ. ಸದ್ಯಕ್ಕೆ ಕಲ್ಯಾಣ ಮಂಟಪಕ್ಕೆ ತೆರಳಿ ಬುಕ್ಕಿಂಗ್ ಮಾಡುತ್ತಿದ್ದು, ಶೀಘ್ರದಲ್ಲೇ ಆನ್‌ಲೈನ್ ವ್ಯವಸ್ಥೆ ಕೂಡ ಜಾರಿ ಮಾಡಲಿದ್ದಾರೆ.  ಬುಕ್ಕಿಂಗ್ ಮಾಡಿ ತಿರುಮಲದಲ್ಲಿ ಮದುವೆ ಆಗಬಹುದು.

Shwetha M