ತಾಯ್ನಾಡಿಗೆ ಬಂದ ಶುಭಾಂಶು ಶುಕ್ಲಾ – ಇಂದು ಪ್ರಧಾನಿ ಮೋದಿ ಜೊತೆ ಮಾತುಕತೆ!

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ರ ಭಾರತಕ್ಕೆ ಬಂದಿದ್ದಾರೆ. ಗಗನಯಾತ್ರಿ ಇಂದು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಬಿಳಿ ಕುಂಬಳಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು – ರಸ ಸೇವನೆಯಿಂದಲೂ ಹತ್ತಾರು ಲಾಭ
ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶುಕ್ಲಾ ಅವರು, ಭೂಮಿಗೆ ಮರಳಿದ ಬಳಿಕ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಮರಳಿದ್ದಾರೆ. ಇದೀಗ ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಹಿಂದಿಗಲಿದ್ದಾರೆ ಎಂದು ಹೇಳಲಾಗಿದೆ.
ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಸೋಮವಾರ (ಇಂದು) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಇಂದು ಪ್ರಧಾನಿ ಮೋದಿ ಅವರನ್ನು ಶುಭಾಂಶು ಶುಕ್ಲಾ ಅವರು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಈ ಬಗ್ಗೆ ಬಿಜೆಪಿಯು ಲೋಕಸಭೆಯಲ್ಲಿ ಚರ್ಚೆಗೆ ಪ್ರಸ್ತಾವನೆ ಇಟ್ಟಿದ್ದಾರೆ. ಮೋದಿ ಭೇಟಿ ಬಳಿಕ ಶುಕ್ಲಾ ಅವರು ತಮ್ಮ ತವರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆ ಇದೆ.
ಶುಕ್ಲಾ, 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.

ನೋಡಿರಿ

