ಭರ್ಜರಿ ಸೆಂಚುರಿ ಬಾರಿಸಿ ಹಲವು ದಾಖಲೆಗಳನ್ನ ಸರಿಗಟ್ಟಿದ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಶುಭ್​ಮನ್ ಗಿಲ್

ಭರ್ಜರಿ ಸೆಂಚುರಿ ಬಾರಿಸಿ ಹಲವು ದಾಖಲೆಗಳನ್ನ ಸರಿಗಟ್ಟಿದ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಶುಭ್​ಮನ್ ಗಿಲ್

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಶುಭಮನ್ ಗಿಲ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಯಲ್ಲಿದ್ದಾರೆ. ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಇಡೀ ಕ್ರಿಕೆಟ್ ಲೋಕವನ್ನೇ ಸೆಳೆಯುತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಪಂದ್ಯದಲ್ಲಿ 133 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 5 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳನ್ನು ಒಳಗೊಂಡಂತೆ 121 ರನ್ ಬಾರಿಸಿದ್ದರು. ಈ ಶತಕದೊಂದಿಗೆ 2023 ರಲ್ಲಿ ಏಕದಿನ ಕ್ರಿಕೆಟ್​ನಲ್ಲಿ 5 ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಅಷ್ಟೇ ಅಲ್ಲದೆ 2023 ರಲ್ಲಿ ಏಕದಿನ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದರು. ಹಾಗೆಯೇ ಈ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1,500 ರನ್ ಪೂರೈಸಿದ ಮೊದಲ ಬ್ಯಾಟರ್ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡರು. ಹಾಗೆಯೇ ಮೊದಲ 32 ಏಕದಿನ ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಹಾಶಿಮ್ ಆಮ್ಲ (1650) ಹೆಸರಿನಲ್ಲಿತ್ತು. ಇದೀಗ 1712 ರನ್ ಕಲೆಹಾಕುವ ಮೂಲಕ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ : ಗಂಡು ಮಗುವಿನ ತಂದೆಯಾದ ಆರ್‌ಸಿಬಿ ಸ್ಟಾರ್ ಆಟಗಾರ ಮ್ಯಾಕ್ಸ್‌ವೆಲ್ – ಜ್ಯೂನಿಯರ್ ಮ್ಯಾಕ್ಸ್‌ವೆಲ್‌ಗೆ ಶುಭಾಶಯಗಳ ಸುರಿಮಳೆ

ಇನ್ನು ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶದ ವಿರುದ್ಧ ಶತಕ ಬಾರಿಸಿದ ಮೂರನೇ ಭಾರತೀಯ ಆಟಗಾರ ಎಂಬ ಹಿರಿಮೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (2012 ರಲ್ಲಿ) ಹಾಗೂ ವಿರಾಟ್ ಕೊಹ್ಲಿ (2014 ರಲ್ಲಿ) ಮಾತ್ರ ಈ ಸಾಧನೆ ಮಾಡಿದ್ದರು. ಇದಲ್ಲದೆ ಭಾರತದ ಪರ ಕಡಿಮೆ ಇನಿಂಗ್ಸ್​ಗಳಲ್ಲಿ 5 ಶತಕಗಳನ್ನು ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 28 ಇನಿಂಗ್ಸ್​ಗಳಲ್ಲಿ 5 ಶತಕ ಸಿಡಿಸಿದ ಶಿಖರ್ ಧವನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 32 ಇನಿಂಗ್ಸ್​ಗಳ ಮೂಲಕ ಶುಭ್​ಮನ್ ಗಿಲ್ 5 ಏಕದಿನ ಶತಕಗಳನ್ನು ಪೂರೈಸಿದ್ದಾರೆ. ಈ ವರ್ಷ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಶುಭ್​ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ. ಗಿಲ್ ಒಟ್ಟು 6 ಶತಕಗಳನ್ನು ಬಾರಿಸಿದ ಅಗ್ರಸ್ಥಾನದಲ್ಲಿದ್ದರೆ, 2023 ರಲ್ಲಿ 5 ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

 

Shantha Kumari