ಆ.30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ – ನಾಡದೇವತೆಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

ಆ.30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ  – ನಾಡದೇವತೆಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ನೀಡುವುದಾಗಿ ಘೋಷಿಸಿತ್ತು. ಆಗಸ್ಟ್‌ 30 ರಂದು ಈ ಯೋಜನೆಗೆ ಮೈಸೂರಿನಲ್ಲಿ ಚಾಲನೆ ಸಿಗಲಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೇಡಿಕೆಕೊಂಡಿದ್ದನ್ನು ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಂಗಳವಾರ (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದ್ದಾರೆ.

ಇದನ್ನೂ ಓದಿ: ನಾದಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ – ಅಕ್ಟೋಬರ್ 15ರ ಬೆಳಗ್ಗೆ ನಾಡಹಬ್ಬಕ್ಕೆ ಚಾಲನೆ

ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

suddiyaana