ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು – ಕಾಂಗ್ರೆಸ್‌ ಹೈಕಮಾಂಡ್‌ ಅಂಗಳದಲ್ಲಿ ಹೈವೋಲ್ಟೇಜ್‌ ಮೀಟಿಂಗ್‌

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು – ಕಾಂಗ್ರೆಸ್‌ ಹೈಕಮಾಂಡ್‌ ಅಂಗಳದಲ್ಲಿ ಹೈವೋಲ್ಟೇಜ್‌ ಮೀಟಿಂಗ್‌

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತ ಗೆದ್ದಿರುವ ಕಾಂಗ್ರೆಸ್‌ ನಲ್ಲಿ ಲೆಕ್ಕಾಚಾರಗಳೇ ಮುಗಿಯುತ್ತಿಲ್ಲ. ಆರಂಭದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ನಡುವೆ ಭಾರಿ ಪೈಪೋಟಿ ನಡೆದಿತ್ತು. ಇದೀಗ ಕಾಂಗ್ರೆಸ್‌  ನಲ್ಲಿ 2 ನೇ ಸುತ್ತಿನ ಸಂಪುಟ ರಚನೆ ಸರ್ಕಸ್‌ ಶುರುವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣಾ – ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಕಾಂಗ್ರೆಸ್‌ ನಲ್ಲಿ ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆಶಿ ಸಂಪುಟ ಸೇರಿದ್ದರು. ಇದೀಗ ಎರಡನೇ ಸುತ್ತಿನ ಸಂಪುಟ ರಚನೆಯಲ್ಲಿ ಉಳಿದ ಸ್ಥಾನಗಳಿಗೆ ಭರ್ತಿ ಮಾಡಬೇಕಾಗಿದೆ. ಹೀಗಾಗಿ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳದಲ್ಲಿ ಹೈವೋಲ್ಟೇಜ್‌ ಮೀಟಿಂಗ್‌ ಫಿಕ್ಸ್‌ ಆಗಿದ್ದು ಇಂದೇ(ಮೇ 24) ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಗೆ ತೆರಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರ ಅಥವಾ ಶನಿವಾರ ಸಿಎಂ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಿಎಂ ಹಾಗೂ ಡಿಸಿಎಂ ಕೇಂದ್ರ ನಾಯಕರ ಜೊತೆ ಚರ್ಚಿಸಿದ ಬಳಿಕವೇ ಈ ಕುರಿತು ಅಂತಿಮ ನಿರ್ಧಾರಗಳಾಗಲಿವೆ ಎಂದು ಹೇಳಲಾಗುತ್ತಿದೆ. ಮೂರು ದಿನಗಳ ವಿಧಾನಸಭೆಯ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ, ಇಬ್ಬರು ಉನ್ನತ ನಾಯಕರು ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಸಿದ್ದರಾಮಯ್ಯ ಅವರು 20 ಹೊಸ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

suddiyaana