ಸಿದ್ದರಾಮಯ್ಯ ಸಿಎಂ.. ಡಿ.ಕೆ ಶಿವಕುಮಾರ್ ಡಿಸಿಎಂ..? – ನಾಳೆಯೇ ಪ್ರಮಾಣವಚನ ಸ್ವೀಕಾರ..?

ಸಿದ್ದರಾಮಯ್ಯ ಸಿಎಂ.. ಡಿ.ಕೆ ಶಿವಕುಮಾರ್ ಡಿಸಿಎಂ..? – ನಾಳೆಯೇ ಪ್ರಮಾಣವಚನ ಸ್ವೀಕಾರ..?

ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಕಾದಾಟ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದು ಬಹುತೇಕ ಪಕ್ಕಾ ಆಗಿದೆ. ಹಾಗೂ ಸಿಎಂ ಗದ್ದುಗೆಗಾಗಿ ಜಿದ್ದಿಗೆ ಬಿದ್ದಿದ್ದ ಡಿ.ಕೆ ಶಿವಕುಮಾರ್ ರನ್ನ ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆಯೇ ಕಾರಣ – ಸಿಎಂ ಆಯ್ಕೆ ಹೊತ್ತಲ್ಲೇ ಡಾ.ಕೆ.ಸುಧಾಕರ್ ಟ್ವೀಟ್ ಬಾಂಬ್!

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಹೈಕಮಾಂಡ್​​​ನಿಂದ ಅಧಿಕೃತ ಘೋಷಣೆ ಬಾಕಿ ಇದ್ದು ರಾಹುಲ್ ಗಾಂಧಿ ಭೇಟಿ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ. ರಾಹುಲ್ ಗಾಂಧಿಯವರು ಸಿದ್ದರಾಮಯ್ಯ, ಡಿಕೆಶಿ ಜತೆ ಮಾತುಕತೆ ನಡೆಸಿ ಚರ್ಚೆ ಬಳಿಕ ಘೋಷಣೆ ಸಾಧ್ಯತೆ ಇದೆ. ಸಿದ್ದರಾಮಯ್ಯಗೆ ಸಿಎಂ ಪಟ್ಟ ಗಟ್ಟಿಯಾಗುತ್ತಿದ್ದಂತೆ ಸಿದ್ದರಾಮಯ್ಯ ಅಭಿಮಾನಿಗಳು ನಿವಾಸದ ಬಳಿ ಜಮಾಯಿಸುತ್ತಿದ್ದಾರೆ. ಹೀಗಾಗಿ ಭದ್ರತೆ ಹೆಚ್ಚಿಸಲಾಗಿದೆ. ಒಂದು ಕೆಎಸ್ಆರ್​ಪಿ ವ್ಯಾನ್, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕುಮಾರಕೃಪಾ ಬಳಿ ಇರುವ ಸಿದ್ದು ಸರ್ಕಾರಿ ನಿವಾಸದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಮೇ18ರ ಮಧ್ಯಾಹ್ನ 3.30 ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ನಾಳೆ ತಪ್ಪಿದರೆ ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳಾಗುತ್ತಿವೆ. ಶುಕ್ರವಾರ ಅಮಾವಾಸ್ಯೆ ಇರುವ ಹಿನ್ನಲೆಯಲ್ಲಿ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರು ಸಲಹೆ ನೀಡಿದ್ದಾರೆ. ಈಗಾಗಲೇ ತಯಾರಿ ಬಗ್ಗೆ ನಾಯಕರಿಂದ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರಂತೆ.

suddiyaana