ತಲೆ ಮೇಲೆ ಕೊಡಪಾನ ಹೊತ್ತ ಸಿದ್ದರಾಮಯ್ಯ – ಲಂಬಾಣಿ ಮಹಿಳೆಯರ ಜೊತೆ ಹೇಗಿತ್ತು ಗೊತ್ತಾ ಡ್ಯಾನ್ಸ್..!? 

ತಲೆ ಮೇಲೆ ಕೊಡಪಾನ ಹೊತ್ತ ಸಿದ್ದರಾಮಯ್ಯ – ಲಂಬಾಣಿ ಮಹಿಳೆಯರ ಜೊತೆ ಹೇಗಿತ್ತು ಗೊತ್ತಾ ಡ್ಯಾನ್ಸ್..!? 

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಬೇಕು ಅಂತಾ ವಿಪಕ್ಷನಾಯಕ ಸಿದ್ದರಾಮಯ್ಯ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರೌಂಡ್ಸ್ ಹಾಕ್ತಿದ್ದಾರೆ. ಇಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಜಂಟಿಯಾಗಿ ಪ್ರಜಾಧ್ವನಿ ಯಾತ್ರೆ ಮಾಡಿದ್ದ ಸಿದ್ದು, ಇದೀಗ ಸಿಂಗಲ್ ಸಿಂಹದಂತೆ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸ್ತಿದ್ದಾರೆ.

ಇದನ್ನೂ ಓದಿ : ಫೆ.13ರಿಂದ 17ರವರೆಗೆ ಬೆಂಗಳೂರು ಏರ್ ಶೋ – ವಿಮಾನ ಪ್ರಯಾಣಕ್ಕೂ ಮುನ್ನ ಈ ಸುದ್ದಿ ನೋಡಿ  

ಇವತ್ತು ಕಲಬುರಗಿ ಜಿಲ್ಲೆಯ ಅಳಂದದಲ್ಲಿ ಕಾಂಗ್ರೆಸ್​ನ ಪ್ರಜಾಧ್ವನಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ರು. ಅದ್ರಲ್ಲೂ ಲಂಬಾಣಿ ಸಮುದಾಯದ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ವೇದಿಕೆ ಮೇಲೆ ನೃತ್ಯ ಮಾಡಿದ್ರು. ಈ ವೇಳೆ ಸಿದ್ದರಾಮಯ್ಯ ಕೂಡ ಲಂಬಾಣಿ ಮಹಿಳೆಯರ ಜೊತೆ ಸಾಂಪ್ರದಾಯಿಕ ನೃತ್ಯಕ್ಕೆ ತಾವೂ ಹೆಜ್ಜೆ ಹಾಕಿದ್ರು.

ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಕೊಲೆಗಳಾಗಿವೆ. ನಮ್ಮ ಕಾಲದಲ್ಲಿ ಹಿಂದೂಗಳಷ್ಟೇ ಅಲ್ಲ, ಅಲ್ಪಸಂಖ್ಯಾತರ ಕೊಲೆ ಆಗಿವೆ. ಅವುಗಳೆಲ್ಲ ಬೇರೆ ಬೇರೆ ವಿಚಾರಕ್ಕೆ ಆಗಿರುವ ಕೊಲೆಗಳಾಗಿವೆ ಎಂದರು.

ಇದೇ ವೇಳೆ ಕಾಂಗ್ರೆಸ್ ಪಾಕಿಸ್ತಾನದಲ್ಲಿ ಸ್ಪರ್ಧೆ ಮಾಡಿದರಷ್ಟೇ 150 ಸ್ಥಾನ ಗೆಲ್ಲುತ್ತದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕರ್ನಾಟಕ ಪಾಕಿಸ್ತಾನದಲ್ಲಿ ಇದೆಯಾ? ಭಾರತದಲ್ಲಿದೆಯಾ? ಚುನಾವಣೆ ನಡೆಯುತ್ತಿರುವುದು ಪಾಕಿಸ್ತಾನದಲ್ಲಾ? ಕರ್ನಾಟಕದಲ್ಲಾ? ಪೆದ್ದು ಪೆದ್ದಾಗಿ ಮಾತನಾಡುತ್ತೀರಲ್ಲಾ ಅಂತಾ ಸಿ.ಟಿ.ರವಿಗೆ ತಿರುಗೇಟು ನೀಡಿದ್ರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರೇ ತಿಂಗಳು ಬಾಕಿ ಇದ್ದು, ಈಗಾಗ್ಲೇ ಮೂರೂ ಪಕ್ಷಗಳು ಗೆಲುವಿಗಾಗಿ ನಾನಾ ಕಸರತ್ತು ಶುರು ಮಾಡಿವೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಕ್ಷೇತ್ರವಾರು ಲೆಕ್ಕಾಚಾರ ಶುರು ಮಾಡಿವೆ. ಜೊತೆಗೆ ನಾಯಕರ ವಾಕ್ ಪ್ರಹಾರವೂ ಜೋರಾಗಿದೆ.

suddiyaana