ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ – ಪ್ರದೀಪ್ ಕುಟುಂಬಸ್ಥರಿಗೆ ಕಾಂಗ್ರೆಸ್ ಮುಖಂಡರಿಂದ ಸಾಂತ್ವನ

ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ – ಪ್ರದೀಪ್ ಕುಟುಂಬಸ್ಥರಿಗೆ ಕಾಂಗ್ರೆಸ್ ಮುಖಂಡರಿಂದ ಸಾಂತ್ವನ

ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಉದ್ಯಮಿ ಪ್ರದೀಪ್‌ ನಿವಾಸಕ್ಕೆ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಜಿಯವರ ಜೊತೆ ಭೇಟಿ ನೀಡಿ, ಮೃತ ಪ್ರದೀಪ್‌ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಇದೇ ವೇಳೆ ಪ್ರದೀಪ್‌ ಸಾವಿಗೆ ಸರ್ಕಾರವೇ ಹೊಣೆಯೆಂದು ಪ್ರತಿಪಕ್ಷ ಕಾಂಗ್ರೆಸ್‌ ಆರೋಪಿಸಿದ್ದು, ಬಿಜೆಪಿ ನಾಯಕ ಹಣಕಾಸಿನ ವ್ಯವಹಾರದಲ್ಲಿ ಯಾಕೆ ತಲೆಹಾಕಿದ್ದಾರೆಂದು ಪ್ರಶ್ನಿಸಿದೆ. ಒಂದೂವರೆ ಕೋಟಿ ಬಂಡವಾಳ ಹೂಡಿದರೂ ಒಂದು ರುಪಾಯಿಯೂ ಲಾಭವಾಗದೇ ಇದ್ದಿದ್ದರಿಂದ ನೊಂದು ಆತ್ಮಹತ್ಯೆಗೆ ಪ್ರದೀಪ್‌ ಶರಣಾಗಿದ್ದಾರೆಂದು ಅವರ ಪತ್ನಿ ಕೈ ನಾಯಕರಿಗೆ ವಿವರಿಸಿದ್ದಾರೆ. ಈಗಾಗ್ಲೇ ಎಫ್‌ಐಆರ್‌ ದಾಖಲಾಗಿದ್ದು, ಕೂಡಲೇ ಡೆತ್‌ನೋಟ್‌ನಲ್ಲಿ ಪ್ರದೀಪ್‌ ಬರೆದಿಟ್ಟ ಎಲ್ಲರನ್ನೂ ಅರೆಸ್ಟ್‌ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ಬಿಪಿಎಲ್ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ವಿತರಣೆ – ರಾಜ್ಯ ಸರ್ಕಾರ  

ಉದ್ಯಮಿ ಪ್ರದೀಪ್ ತಲೆಗೆ‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ ಎಫ್ಐಆರ್ ದಾಖಲಾಗಿದೆ. ಉದ್ಯಮಿ ಪ್ರದೀಪ್ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡೆತ್‌ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಜಿ.ರಮೇಶ್‌ ರೆಡ್ಡಿ, ಕೆ.ಗೋಪಿ‌, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖವಾಗಿದೆ.

suddiyaana