‘ಇದೇ ನನ್ನ ಕೊನೇ ಚುನಾವಣೆ.. ಮುಂದೆ ಯತೀಂದ್ರ, ಧವನ್ ಇದ್ದಾರೆ’ – ಮೊಮ್ಮಗನ ರಾಜಕೀಯ ಪ್ರವೇಶಕ್ಕೆ ಸಿದ್ದು ಪೀಠಿಕೆ!

‘ಇದೇ ನನ್ನ ಕೊನೇ ಚುನಾವಣೆ.. ಮುಂದೆ ಯತೀಂದ್ರ, ಧವನ್ ಇದ್ದಾರೆ’ – ಮೊಮ್ಮಗನ ರಾಜಕೀಯ ಪ್ರವೇಶಕ್ಕೆ ಸಿದ್ದು ಪೀಠಿಕೆ!

ಮತ್ತೊಮ್ಮೆ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟು ವರುಣಾ ಕ್ಷೇತ್ರದಿಂದ ಅಖಾಡಕ್ಕಿಳಿದಿರುವ ಸಿದ್ದರಾಮಯ್ಯ ಇವತ್ತು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಳಗ್ಗೆಯೇ ಹುಟ್ಟೂರಾದ ಸಿದ್ದರಾಮನಹುಂಡಿಗೆ ತೆರಳಿದ ಸಿದ್ದರಾಮಯ್ಯ ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ರು. ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ಹಾಗೂ ಉತ್ತನಹಳ್ಳಿಯ ತ್ರಿಪುರಸುಂದರಿ ದೇವಿಗೂ ಪೂಜೆ ಸಲ್ಲಿಸಿದರು. ತಾಲ್ಲೂಕು ಕೇಂದ್ರ ನಂಜಗೂಡಿನಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇದೇ ನನ್ನ ಕೊನೇ ಚುನಾವಣೆ ಅನ್ನೋದನ್ನ ಒತ್ತಿ ಒತ್ತಿ ಹೇಳಿದ್ರು.  ಹೀಗಾಗಿ ಬಹುಮತದಿಂದ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ರು.

ಇದನ್ನೂ ಓದಿ: ‘ಸ್ವರೂಪ್ ನನ್ನ ಮಗ ಇದ್ದಂತೆ, ನಿದ್ದೆ ಬಿಟ್ಟು ಗೆಲ್ಲಿಸಿ’ – ಭವಾನಿ ರೇವಣ್ಣ ಮಾತು ಅಚ್ಚರಿ ಮೂಡಿಸಿದ್ದೇಕೆ?

ನಾನು ಕೊನೆಯ ಬಾರಿಗೆ ಚುನಾವಣೆ ಎದುರಿಸುತ್ತಿದ್ದೇನೆ. ಆಮೇಲೆ ಯತೀಂದ್ರ, ಧವನ್ ರಾಕೇಶ್ ಇದ್ದಾರೆ. ಮೊಮ್ಮಗ ಧವನ್ ರಾಜಕೀಯಕ್ಕೆ ಬರಲು ಇನ್ನೂ 8 ವರ್ಷ ಬೇಕು. ಅವನ ಓದು ಮುಗಿದ ನಂತರ ರಾಜಕಾರಣಕ್ಕೆ ಬರುತ್ತಾನೆ.. ರಾಕೇಶ್ ಮೇಲೆ ಇದ್ದ ಪ್ರೀತಿಯನ್ನು ಅವನ ಮಗನ ಮೇಲೂ ತೋರಿಸುತ್ತಿದ್ದೀರಿ. ನಿಮಗೆ ಧನ್ಯವಾದಗಳು ಎನ್ನುವ ಮೂಲಕ ಮೊಮ್ಮಗನ ರಾಜಕೀಯ ಎಂಟ್ರಿಗೆ ಈಗಲೇ ಪೀಠಿಕೆ ಹಾಕಿದ್ರು.

suddiyaana