ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಎಂದ ಸಿದ್ದರಾಮಯ್ಯ – ಕಾಂಗ್ರೆಸ್ ನಲ್ಲಿ ಭುಗಿಲೇಳುತ್ತಾ ಭಿನ್ನಮತ?

ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಎಂದ ಸಿದ್ದರಾಮಯ್ಯ – ಕಾಂಗ್ರೆಸ್ ನಲ್ಲಿ ಭುಗಿಲೇಳುತ್ತಾ ಭಿನ್ನಮತ?

ಕಾಂಗ್ರೆಸ್​​ನಲ್ಲಿ ವಿಧಾನಸಭಾ ಚುನಾವಣೆಗಿಂತ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಬಗ್ಗೆಯೇ ಬಾರೀ ಚರ್ಚೆಯಾಗಿತ್ತು. ಆ ಕ್ಷೇತ್ರ ಈ ಕ್ಷೇತ್ರ ಅನ್ಕೊಂಡು ಕೊನೆಗೆ ವರುಣಾ ಕ್ಷೇತ್ರದಿಂದಲೇ ಟಿಕೆಟ್ ಅನೌನ್ಸ್ ಆಗಿತ್ತು. ಆದ್ರೆ ಈಗ ಸಿದ್ದರಾಮಯ್ಯ ತಮ್ಮ ಸ್ಪರ್ಧೆ ಬಗ್ಗೆ ಮತ್ತೊಂದು ಟ್ವಿಸ್ಟ್ ಕೊಟ್ಟಿದ್ದಾರೆ.

ವರುಣಾ ಕ್ಷೇತ್ರದ ಜೊತೆ ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡೋದಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೆಚ್​ಡಿ ಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೋಲಾರ ಕ್ಷೇತ್ರದ ಜನರಿಂದ ನನಗೆ ಸಾಕಷ್ಟು ಒತ್ತಡ ಬರುತ್ತಿದೆ. ಅಲ್ಲಿಂದಲೂ ಸ್ಪರ್ಧಿಸಬೇಕೆಂದು ಬೇಡಿಕೆ ಇಡುತ್ತಿದ್ದಾರೆ ಎಂದಿದ್ದಾರೆ. ಈ ಮೂಲಕ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಮಾಡಾಳ್ ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ – ಬಿಜೆಪಿ ಶಾಸಕನ ಸಂಪತ್ತಿನ ಸತ್ಯ ಬಯಲಾಗುತ್ತಾ?

ವರುಣಾ ವಿಧಾನಸಭಾ ಕ್ಷೇತ್ರ ಸಿದ್ದರಾಮಯ್ಯಗೆ ಅದೃಷ್ಟದ್ದು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಮುಖ್ಯಮಂತ್ರಿ ಆಗಿದ್ದು. ನನ್ನ ಕೊನೆಯ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ನನಗೆ ಸಾಕಷ್ಟು ಒತ್ತಡ ಬರುತ್ತಿದೆ ಎಂದು ಹೇಳಿದ್ದಾರೆ. ಪುತ್ರ ಡಾ.ಯತೀಂದ್ರ ಸ್ಪರ್ಧೆ ಮಾಡುವುದಿಲ್ಲ ಎಂದ ತಿಳಿಸಿದ್ದಾರೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದೂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ತಾವೇ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಸಿದ್ದರಾಮಯ್ಯ ಅವರು ಕೋಲಾರದಿಂದ ಕಣಕ್ಕಿಳಿಯುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ನಂತರ ಕೊನೇ ಕ್ಷಣದಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಕೋಲಾರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯಗೆ ವರುಣಾದಿಂದ ಟಿಕೆಟ್ ಘೋಷಿಸಲಾಗಿತ್ತು.

ಅಸಲಿಗೆ ಸಿದ್ದರಾಮಯ್ಯ 2 ಕ್ಷೇತ್ರಗಳಿಂದ ಸ್ಪರ್ಧಿಸಿದರೆ ಕಾಂಗ್ರೆಸ್​ನಲ್ಲೇ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ. ಯಾಕಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಬ್ಬರಿಗೆ ಒಂದೇ ಟಿಕೆಟ್ ಎಂಬ ಕಟ್ಟುನಿಟ್ಟಿನ ರೂಲ್ಸ್ ಮಾಡಿದ್ದಾರೆ. ಹೀಗಿದ್ದರೂ ಸಿದ್ದರಾಮಯ್ಯ 2 ಕ್ಷೇತ್ರಗಳಿಂದ ಸ್ಪರ್ಧೆ ಮಾಡ್ತೀನಿ ಅಂದಿರೋದು ಸಾಕಷ್ಟು ಕುತೂಹಲ ಹುಟ್ಟು ಹಾಕಿದೆ.

suddiyaana