ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಹಾಸನಾಂಬ ದೇವಿ ದೇವಾಲಯದ ಬಾಗಿಲು ಓಪನ್ ಆಗಿ 1 ವಾರ ಆಗಿದೆ. ನಿತ್ಯ ಸಾವಿರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆ ದರ್ಶನ ಪಡೆದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ದೇವಿಯ ದರ್ಶನ ಪಡೆದ್ರು.
ಇದನ್ನೂ ಓದಿ:ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್ – ಕುಟುಂಬ ಸಮೇತ ಆಗಮಿಸಿ ದೇವಿಯ ದರ್ಶನ ಪಡೆದ ಸಾಹಿತಿ
ಸಿಎಂ ಸಿದ್ದರಾಮಯ್ಯ ಕಳೆದ ಎರಡು ವರ್ಷಗಳಿಂದ ಹಾಸನಾಂಬೆ ದೇವಿ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಕೂಡ ಸಿದ್ದರಾಮಯ್ಯ ಹಾಸನಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ12 ಗಂಟೆಗೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು. ದೇವಿ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.
ಇದೇ ವೇಳೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು. ಸಿಎಂ ಆಗಮನದ ಹಿನ್ನೆಲೆ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.

ನೋಡಿರಿ

