ಕರ್ನಾಟಕದ ಹಲವೆಡೆ ಗೊಬ್ಬರಕ್ಕಾಗಿ ಗಲಾಟೆ- ರೈತರ ಆಕ್ರೋಶಕ್ಕೆ ಮಣಿದ ಸಿಎಂ, ಕೇಂದ್ರ ಸಚಿವ ಜೆಪಿ ನಡ್ಡಾಗೆ ಸಿದ್ದರಾಮಯ್ಯ ಪತ್ರ

ಕರ್ನಾಟಕದ ಹಲವೆಡೆ ಗೊಬ್ಬರಕ್ಕಾಗಿ ಗಲಾಟೆ- ರೈತರ ಆಕ್ರೋಶಕ್ಕೆ ಮಣಿದ ಸಿಎಂ,  ಕೇಂದ್ರ ಸಚಿವ ಜೆಪಿ ನಡ್ಡಾಗೆ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆಯಾ?. ಇದೀಗ ರೈತರು ಯೂರಿಯಾ ಗೊಬ್ಬರದ ತೀವ್ರ ಕೊರತೆಯಿಂದ ಕಂಗಾಲಾಗಿದ್ದಾರೆ. ಹಲವು ಜಿಲ್ಲೆಗಳಲ್ಲಿ ಗೊಬ್ಬರಕ್ಕಾಗಿ ಗಲಾಟೆ, ಪ್ರತಿಭಟನೆಗಳು ನಡೆಯುತ್ತಿವೆ. ರೈತರ ಆಕ್ರೋಶಕ್ಕೆ ಸರ್ಕಾರ ಸ್ಪಂದಿಸಿದ್ದು, ಸಿಎಂ ಸಿದ್ದರಾಮಯ್ಯ, ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು, ಗೊಬ್ಬರ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ ಕಳವು ನಡೆದಿದೆ.. ಶೀಘ್ರವೇ ಸಾಕ್ಷ್ಯ ಒದಗಿಸುತ್ತೇನೆ! – ಹೊಸ ಬಾಂಬ್‌ ಸಿಡಿಸಿದ ರಾಹುಲ್‌ ಗಾಂಧಿ!

ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತವೆ. ಆದರೆ, ಈ ಬಾರಿ ರೈತರು ಗೊಬ್ಬರ ಕೊರತೆ ಎದುರಿಸುತ್ತಿದ್ದಾರೆ. ಬೆಳೆಗಳಿಗೆ ಅಗತ್ಯವಾದ ಗೊಬ್ಬರದ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಅಂತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ, ಗದಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯಕತೆಯಿದೆ. ಏಕೆಂದರೆ ಕರ್ನಾಟಕಕ್ಕೆ ಈ ವರ್ಷದ ಆರಂಭದಲ್ಲಿಯೇ ಮಾನ್ಸೂನ್ ಬಂದಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿಯು ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಂಗಾರು ಆರಂಭಿಕ ಬಿತ್ತನೆ ಚಟುವಟಿಕೆ ಆರಂಭವಾಗಿದೆ. ಹೆಚ್ಚಿನ ಗೊಬ್ಬರ ಬಳಸುವ ಬೆಳೆಯಾದ ಮೆಕ್ಕೆಜೋಳದ ವಿಸ್ತೀರ್ಣವು ಸುಮಾರು 2 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚಾಗಿದೆ. ದ್ವಿದಳ ಧಾನ್ಯಗಳ ವಿಸ್ತೀರ್ಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಆಗಿದೆ ಎಂದಿದ್ದಾರೆ. 13,000 ಹೆಕ್ಟೇರ್ ಖಾರಿಫ್ ಪೂರ್ವ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಅಶಾಂತಿ ಆತಂಕವನ್ನು ಸೃಷ್ಟಿಸುತ್ತಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಂಚಿಕೆ ಪ್ರಕಾರ ರಸಗೊಬ್ಬರ ಪೂರೈಸಿ. ಬಾಕಿ ಕೊರತೆ ಇರುವ ಯೂರಿಯಾದ ಪೂರೈಕೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Sulekha