ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ – ವೈದ್ಯರ ಸ್ಪಷ್ಟನೆ
ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಗಣ್ಯರು
ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಡಾ.ಎಸ್.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಜಾಸ್ತಿ ಆಹಾರ ಸ್ವೀಕರಿಸುತ್ತಿಲ್ಲ. ಗಂಜಿ, ನೀರು, ದ್ರವಾಹಾರವನ್ನು ಸೇವಿಸುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂದು ಡಾ. ಎಸ್.ಬಿ. ಪಾಟೀಲ್ ಭಕ್ತರಿಗೆ ತಿಳಿಸಿದ್ದಾರೆ. ಇನ್ನು ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ಜ್ಞಾನಯೋಗಾಶ್ರಮಕ್ಕೆ ಗಣ್ಯರ ದಂಡೇ ಹರಿದುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಅಲ್ಲದೇ ಎಂ.ಬಿ ಪಾಟೀಲ್, ಎಂ.ಎಲ್.ಸಿ ಪ್ರಕಾಶ್ ಹುಕ್ಕೇರಿ, ಎಂ.ಬಿ ಪಾಟೀಲ್, ಲಕ್ಷ್ಣಣ್ ಸವದಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: ಹಾವೇರಿಯಲ್ಲಿ ಮೊಳಗಲಿದೆ ಕನ್ನಡ ಡಿಂಡಿಮ- ಸಾಹಿತ್ಯ ಪ್ರೇಮಿಗಳ ಆರೋಗ್ಯ ಕಾಪಾಡಲು ಸಕಲ ಸಿದ್ಧತೆ
‘ಸಿದ್ದೇಶ್ವರ ಶ್ರೀಗಳು ಆರಾಮಾಗಿದ್ದಾರೆ. ಆತಂಕ ಪಡುವುದು ಬೇಡ. ಭಕ್ತರು ವದಂತಿಗೆ ಕಿವಿಗೊಡಬೇಡಿ’ ಎಂದು ಸಿದ್ದೇಶ್ವರ ಶ್ರೀ ಭೇಟಿ ಬಳಿಕ ಸುತ್ತೂರು ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡಾ ಶ್ರೀಗಳ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಕೂಡಾ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಮತ್ತೊಂದೆಡೆ ಶ್ರೀಗಳ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಮತ್ತು ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.