ಸಿದ್ದು v/s ಸೋಮಣ್ಣ, ಡಿಕೆಶಿ v/s ಅಶೋಕ್ – ಕಾಂಗ್ರೆಸ್ ಕಲಿಗಳನ್ನು ಕಟ್ಟಿಹಾಕಲು ಬಿಜೆಪಿ ಪ್ಲಾನ್
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆಯೇ ಚುನಾವಣೆಯ ರಣಕಹಳೆ ಮೊಳಗಿಸಿದೆ. ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವಾಗಲೇ ವರುಣಾ ಕ್ಷೇತ್ರ ಮತ್ತು ಕನಕಪುರದ ಕ್ಷೇತ್ರದ ಬಗ್ಗೆ ಬಿಜೆಪಿ ಜಾಸ್ತಿ ಒತ್ತು ನೀಡಿದೆ. ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನಾಗಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಆರ್. ಅಶೋಕ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಇದನ್ನೂ ಓದಿ: ನಾಟು ನಾಟು ಅಲ್ಲ ಮೋದಿ – ಮೋದಿ ಸಾಂಗ್ – ಬಿಜೆಪಿಯಲ್ಲಿ ಮೋದಿ ಸಾಧನೆಯ ಹಾಡು..!
ಪ್ರತಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನಾಗಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗಿದೆ. ಜತೆಗೆ ಚಾಮರಾಜನಗರ ಕ್ಷೇತ್ರದಿಂದಲೂ ಸೋಮಣ್ಣಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ವರುಣಾ ಕ್ಷೇತ್ರದಲ್ಲಿ ಚುನಾವಣಾ ಪೈಪೋಟಿ ನಿರೀಕ್ಷೆಯಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರದಲ್ಲಿ ಆರ್. ಅಶೋಕ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದರೊಂದಿಗೆ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಿಬ್ಬರ ನಡುವೆ ಪೈಪೋಟಿ ಏರ್ಪಡಲಿದೆ. ಮತ್ತೊಂದೆಡೆ ಪದ್ಮನಾಭನಗರ ಕ್ಷೇತ್ರದಿಂದಲೂ ಅಶೋಕ್‌ಗೆ ಟಿಕೆಟ್ ನೀಡಲಾಗಿದೆ.