ಡಿಕೆಶಿ, ಸಿದ್ದರಾಮಯ್ಯಗೆ ಮುತ್ತಿಗೆ – ಕೆಪಿಸಿಸಿ ಕಚೇರಿ ಬಳಿ ವಿಷದ ಬಾಟಲಿ ಹಿಡಿದು ರಂಪಾಟ!

ಡಿಕೆಶಿ, ಸಿದ್ದರಾಮಯ್ಯಗೆ ಮುತ್ತಿಗೆ – ಕೆಪಿಸಿಸಿ ಕಚೇರಿ ಬಳಿ ವಿಷದ ಬಾಟಲಿ ಹಿಡಿದು ರಂಪಾಟ!

ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ತಿಂಗಳಷ್ಟೇ ಬಾಕಿ ಇದೆ. ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಈಗ ಎರಡನೇ ಪಟ್ಟಿ ಬಿಡುಗಡೆ ಸಿದ್ಧತೆಯಲ್ಲಿದೆ. ಆದರೆ ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ನಮ್ಮ ನಾಯಕರಿಗೇ ಟಿಕೆಟ್ ನೀಡುವಂತೆ ದುಂಬಾಲು ಬಿದ್ದಿದ್ದಾರೆ.

ಇದನ್ನೂ ಓದಿ : ಯಾವ ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು – ಸಭೆಯಲ್ಲಿ ಯಾರ್ಯಾರ ಬಗ್ಗೆ ಚರ್ಚೆ..?

ಇವತ್ತು ಕೆಪಿಸಿಸಿ ಕಚೇರಿ ಮುಂದೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಕಡೂರು, ತರೀಕೆರೆ, ಚಿಕ್ಕಮಗಳೂರು, ಮೊಳಕಾಲ್ಮೂರು, ದಾಸರಹಳ್ಳಿ ಭಾಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅದ್ರಲ್ಲೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಕ್ಷೇತ್ರದಲ್ಲಿ ಹೆಚ್.ಎಂ ಗೋಪಿಕೃಷ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ವಿಷದ ಬಾಟಲಿ ಹಿಡಿದು ರಂಪಾಟ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಾವಿರಾರು ಬೆಂಬಲಿಗರು, ಗೋಪಾಲಕೃಷ್ಣಗೆ ಟಿಕೆಟ್ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ವಿಷದ ಬಾಟಲಿ ಕಿತ್ತುಕೊಳ್ಳಲು ಮುಂದಾದ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಡಿವಾಳ ಸಮಾಜದ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ‌ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕಚೇರಿ ಸುತ್ತ ಬ್ಯಾರಿಕೇಡ್ ಅಳವಡಿಸಲಾಗಿತ್ತು.

suddiyaana