ಸಿಕ್ಕಿಂ ಮೇಘಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆ  

ಸಿಕ್ಕಿಂ ಮೇಘಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆ  

ಸಿಕ್ಕಿಂನಲ್ಲಿ ಸಂಭವಿಸಿದ  ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಪ್ರವಾಹದಲ್ಲಿ ಸುಮಾರು 103 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ಮಾಹಿತಿ ನೀಡಿದೆ.

ಉತ್ತರ ಸಿಕ್ಕಿಂನಲ್ಲಿ ಬುಧವಾರ ಲೊನಾಕ್ ಸರೋವರದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿತ್ತು. ಈ ದುರಂತದಲ್ಲಿ 19 ಮಂದಿ ಸಾವನ್ನಪ್ಪಿದ್ದು, 103 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ. ಅಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಿಂದ ಸುಮಾರು 2,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನಾಡಹಬ್ಬ ದಸರಾಗೆ ಕ್ಷಣಗಣನೆ – 9 ದಿನದಲ್ಲಿ ಅರಮನೆಯಲ್ಲಿ ಏನೇನು ಕಾರ್ಯಕ್ರಮ ನಡೆಯಲಿದೆ?

ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ತೀಸ್ತಾ ನದಿ ಜಲಾನಯನ ಪ್ರದೇಶದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಮೇಘಸ್ಪೋಟದ ತೀವ್ರತೆಗೆ ಕೆಸರು ಮಣ್ಣಿನಡಿ ದೊಡ್ಡ ದೊಡ್ಡ ವಾಹನಗಳುಸಿಲುಕಿಕೊಂಡಿವೆ. ಸೇನೆಯ ದೊಡ್ಡ ದೊಡ್ಡ ಟ್ರಕ್ ಗಳು ಕೆಸರಿನಲ್ಲಿ ಹೂತು ಹೋಗಿದ್ದು ಅವುಗಳನ್ನು ಹೊರತೆಗೆಯುವ ಕೆಲಸಗಳು ನಡೆಯುತ್ತಿವೆ.

ಸಿಕ್ಕಿರುವ 19 ಮೃತದೇಹಗಳಲ್ಲಿ ನಾಲ್ವರನ್ನು ‘ಸೇನಾ ಜವಾನರು’ ಎಂದು ಗುರುತಿಸಲಾಗಿದೆ ಎಂದು ನೆರೆಯ ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ. ಅಲ್ಲದೆ ಗಾಯಗೊಂಡವರು ಸಿಕ್ಕಿಂನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಉತ್ತರ ಸಿಕ್ಕಿಂನ ಲಾಚೆನ್, ಲಾಚುಂಗ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Shwetha M