ಶಿರಸಿ ಮಾರಿಕಾಂಬಾ ಜಾತ್ರೆಗೆ ತೆರಳುವವರಿಗೆ ಗುಡ್‌ನ್ಯೂಸ್!‌ –  ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ!

ಶಿರಸಿ ಮಾರಿಕಾಂಬಾ ಜಾತ್ರೆಗೆ ತೆರಳುವವರಿಗೆ ಗುಡ್‌ನ್ಯೂಸ್!‌ –  ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ!

ದಕ್ಷಿಣ ಭಾರತದ ಅತಿದೊಡ್ಡ ಹಾಗೂ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಭಕ್ತ ಸಾಗರದ ನಡುವೆ ಕಂಗೊಳಿಸುತ್ತಿರುವ ಶ್ರೀ ಮಾರಿಕಾಂಬೆ ರಥಾರೂಢಳಾಗಿ ಭಕ್ತರಿಗೆ ದರ್ಶನ ನೀಡುತ್ತಿದ್ದಾಳೆ. ಮಾರಿಕಾಂಬಾ ಜಾತ್ರೆಗೆ ತೆರಳುವವರಿಗೆ ರೈಲ್ವೇ ಇಲಾಖೆ ಗುಡ್‌ನ್ಯೂಸ್‌ ಕೊಟ್ಟಿದೆ. ಪ್ರಯಾಣಿಕರಿಗೆ ಅನುಕೂಲವಾಗಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಇದನ್ನೂ ಓದಿ: 1 ಪ್ಲೇಟ್‌ ಇಡ್ಲಿ ಬೆಲೆ ಜಸ್ಟ್‌ 315 ರೂ.! – ರಾಮೇಶ್ವರಂ ಕೆಫೆಯ ಇಡ್ಲಿ ಇಷ್ಟೊಂದು ಕಾಸ್ಟ್ಲಿ?

ಈ ಐತಿಹಾಸಿಕ ಶಿರಸಿ ಜಾತ್ರೆಯು ಫೆಬ್ರವರಿ 24 ಮಾರ್ಚ್ 4 ರವರೆಗೆ ಒಂಬತ್ತು ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ನಡೆಯಲಿದೆ. ಮಾರಿಕಾಂಬಾ ಜಾತ್ರೆಗೆ ಕರ್ನಾಟಕದಿಂದಷ್ಟೇ ಅಲ್ಲದೇ ನೆರೆಯ ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಈ ಜಾತ್ರೆಗೆ ಆಗಮಿಸಲಿದ್ದಾರೆ. ಇದೀಗ ಬೆಂಗಳೂರಿನಿಂದ ಶಿರಸಿಗೆ ವಿಶೇಷ ರೈಲು ಸೇವೆ ನೀಡಿದೆ. ಈ ವಿಶೇಷ ರೈಲು (06587) ಫೆ.27ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ. ಅದೇ ರೀತಿ ರೈಲು (06588) ಫೆ.28ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿ ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ. ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಇನ್ನು ಜಾತ್ರೆಯ ಅಂಗವಾಗಿ ಯಶವಂತಪುರ-ಶಿವಮೊಗ್ಗ ನಡುವೆ ಸಂಚರಿಸುವ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ. ಯಶವಂತಪುರದಿಂದ ಹೊರಡುವ ರೈಲು ಶಿವಮೊಗ್ಗದ ಬದಲಾಗಿ ತಾಳಗುಪ್ಪವರೆಗೆ ಸಂಚರಿಸಲಿದೆ. ಈ ರೈಲು ಶಿವಮೊಗ್ಗದ ಬದಲು ತಾಳಗುಪ್ಪದಿಂದಲೇ ಪ್ರಯಾಣ ಆರಂಭಿಸಲಿದೆ. ಈ ವಿಸ್ತರಣೆಯು ಒಂದು ಟ್ರಿಪ್‌ಗೆ ಮಾತ್ರ ಅನ್ವಯಿಸಲಿದೆ.

ಮಾರ್ಚ್ 1ರಂದು ಯಶವಂತಪುರದಿಂದ ರಾತ್ರಿ 12.15ಕ್ಕೆ ಹೊರಟು ಬೆಳಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದೆ. ಅದೇ ದಿನ ರಾತ್ರಿ 10 ಗಂಟೆಗೆ ತಾಳಗುಪ್ಪದಿಂದ ಹೊರಟು, ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ. ಶಿವಮೊಗ್ಗದಿಂದ ಮುಂದಕ್ಕೆ ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡೇರಿ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

Shwetha M

Leave a Reply

Your email address will not be published. Required fields are marked *