ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ವಿಡಿಯೋ ಹಂಚಿದ್ದ ಇಬ್ಬರು ಅರೆಸ್ಟ್‌!

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ವಿಡಿಯೋ ಹಂಚಿದ್ದ ಇಬ್ಬರು ಅರೆಸ್ಟ್‌!

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣದ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್​ಐಟಿ ಇವತ್ತು ಬಂಧಿಸಿದೆ.

ಇದನ್ನೂ ಓದಿ: ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರಾ ಯೋಗಿ? – ಮೊದಲ ಬಾರಿ ಮೌನ ಮುರಿದ ಯುಪಿ ಸಿಎಂ

ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್​ಬುಕ್​ನಲ್ಲಿ ಮೊದಲ ಪೋಸ್ಟ್ ಮಾಡಿದ್ದರು. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದ. ಈ ಸಂಬಂಧ ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದ್ರೆ, ನವೀನ್​ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಪೆನ್ ಡ್ರೈವ್ ಹಂಚಿಕೆ ಆರೋಪ ಹೊತ್ತುಕೊಂಡಿರುವ ನವೀನ್ ಗೌಡ ಹಾಗೂ ಚೇತನ್ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್ ಕಡೆ ಇವರಿಬ್ಬರು ಬಂದಿದ್ದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳು  ನವೀನ್‌ ಗೌಡ ಹಾಗೂ ಚೇತನ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

Shwetha M