ಭಾರತದಲ್ಲಿ ಹೆಚ್ಚಾಯ್ತು ಕೊರೊನಾ ಭೀತಿ – ಒಂದೇ ದಿನ 10,753 ಪಾಸಿಟಿವ್ ಕೇಸ್

ಭಾರತದಲ್ಲಿ ಹೆಚ್ಚಾಯ್ತು ಕೊರೊನಾ ಭೀತಿ – ಒಂದೇ ದಿನ 10,753 ಪಾಸಿಟಿವ್ ಕೇಸ್

ನವದೆಹಲಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 10,753 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,37,20ಕ್ಕೆ ತಲುಪಿದೆ.

ಇದನ್ನೂ ಓದಿ: ಉದ್ಯೋಗಿಗೆ ಸಿಕ್ತು ಬಂಪರ್ ಲಾಟರಿ – ವೇತನದ ಜೊತೆಗೆ 1 ವರ್ಷ ರಜೆ ನೀಡಿದ ಕಂಪನಿ!

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,08,022ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,091ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,23,211ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,58,625 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,38,77,832 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,25,517 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

suddiyaana