ಅಜಾತಶತ್ರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ

ಅಜಾತಶತ್ರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ

ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಎಸ್.ಎಂ.ಕೃಷ್ಣ ಅವರು ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇದಾದ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.

2017ರಲ್ಲಿ ಬಿಜೆಪಿ ಸೇರ್ಪಡೆ ಬಹುಕಾಲ ಕಾಂಗ್ರೆಸ್​ನಲ್ಲಿಯೇ ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ಮಾರ್ಚ್ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿ ಸೇರ್ಪಡೆಯಾದ 2018ರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯದಾಗಿ ಬಹಿರಂಗವಾಗಿ ಪ್ರಚಾರ ನಡೆಸಿದ್ದರು. ತದನಂತರ ಸಕ್ರಿಯ ರಾಜಕಾರಣದಿಂದ ಎಸ್.ಎಂ.ಕೃಷ್ಣ ಹಿಂದೆ ಸರಿದಿದ್ದರು.

ಎಸ್.ಎಂ.ಕೃಷ್ಣ ಅವರ ವಿದ್ಯಾಭ್ಯಾಸ ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿದ್ದಾರೆ. ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿ ವೇತನವನ್ನು ಎಸ್.ಎಂ.ಕೃಷ್ಣ ಪಡೆದುಕೊಂಡಿದ್ದರು.

Sulekha