ಮಾವನ ಪರ ಅಖಾಡಕ್ಕಿಳಿದ ಸೊಸೆ – ಮನೆ ಮನೆಗೂ ತೆರಳಿ ಮತಯಾಚಿಸಿದ ಸ್ಮಿತಾ ರಾಕೇಶ್ ಸಿದ್ದರಾಮಯ್ಯ

ಮಾವನ ಪರ ಅಖಾಡಕ್ಕಿಳಿದ ಸೊಸೆ – ಮನೆ ಮನೆಗೂ ತೆರಳಿ ಮತಯಾಚಿಸಿದ ಸ್ಮಿತಾ ರಾಕೇಶ್ ಸಿದ್ದರಾಮಯ್ಯ

ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಪ್ರಚಾರಕ್ಕಿಳಿದಿದ್ದಾರೆ. ಮಾವನ ಪರ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ, ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮತಶಿಕಾರಿ ಜೊತೆ ದೋಸೆ ತಯಾರಿ – ಮೈಲಾರಿ ಹೋಟೆಲ್‌ನಲ್ಲಿ ದೋಸೆ ಹಾಕಿದ ಪ್ರಿಯಾಂಕಾ ಗಾಂಧಿ

ಗುರುವಾರ ಬೆಳಗ್ಗೆಯೇ ಪ್ರಚಾರಕ್ಕೆ ಆಗಮಿಸಿರುವು ಸ್ಮಿತಾ ರಾಕೇಶ್ ಸಿದ್ದರಾಮಯ್ಯ, ತಾಯೂರು ಗ್ರಾಮದಲ್ಲಿ ಮತಯಾಚನೆ ಮಾಡಿದರು. ಮನೆ ಮನೆಗೂ ತೆರಳಿ ಎಲ್ಲರನ್ನೂ ಪ್ರೀತಿಯಿಂದ ಮಾತನಾಡಿಸಿದರು. ಈ ವೇಳೆ ಗ್ರಾಮಸ್ಥರು ಕೂಡಾ ಸ್ಮಿತಾ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ತನ್ನ ಮಾವ ಸಿದ್ದರಾಮಯ್ಯ ಅವರನ್ನು ಬಹುಮತಗಳಿಂದ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ಶಾಸಕ ಯತೀಂದ್ರ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಇನ್ನು ನಟಿ ರಮ್ಯಾ ಮತ್ತು ನಟ ದುನಿಯಾ ವಿಜಯ್ ಕೂಡಾ ಸದ್ಯದಲ್ಲೇ ವರುಣಾದಲ್ಲಿ ಪ್ರಚಾರ ಮಾಡಲು ಬರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

suddiyaana