ಆಸ್ಟ್ರೇಲಿಯಾ ವಿರುದ್ಧ ಸಿಡಿದೆದ್ದ ಸ್ಮೃತಿ ಮಂಧಾನ  – ಅರ್ಧಶತಕದೊಂದಿಗೆ ವಿಶೇಷ ದಾಖಲೆ

ಆಸ್ಟ್ರೇಲಿಯಾ ವಿರುದ್ಧ ಸಿಡಿದೆದ್ದ ಸ್ಮೃತಿ ಮಂಧಾನ  –  ಅರ್ಧಶತಕದೊಂದಿಗೆ ವಿಶೇಷ ದಾಖಲೆ

ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ   ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. ಈ ಅರ್ಧಶತಕದೊಂದಿಗೆ ಸ್ಮೃತಿ ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಉತ್ತಮ ಆರಂಭ ಒದಗಿಸಿದ್ದರು. ಅಲ್ಲದೆ ಕೇವಲ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಹಾಫ್ ಸೆಂಚುರಿಯೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸ್ಮೃತಿ ಮಂಧಾನ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 22 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಆಸೀಸ್ ಪಡೆ ವಿರುದ್ಧ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಮಿಥಾಲಿ ರಾಜ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ 2ನೇ ಭಾರತೀಯ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಸ್ಮೃತಿ ಈವರೆಗೆ ಆಸೀಸ್ ವಿರುದ್ಧ 1,078 ರನ್ ಕಲೆಹಾಕಿದ್ದಾರೆ. ಇನ್ನು ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಬಾರಿಸಿದ 58 ರನ್​ಗಳ ನೆರವಿನೊಂದಿಗೆ ಟೀಮ್ ಇಂಡಿಯಾ 48.3 ಓವರ್​ಗಳಲ್ಲಿ 214 ರನ್​ಗಳಿಸಿ ಆಲೌಟ್ ಆಗಿದೆ. ಅದರಂತೆ ಆಸ್ಟ್ರೇಲಿಯಾ ತಂಡವು 50 ಓವರ್​ಗಳಲ್ಲಿ 215 ರನ್​ಗಳ ಗುರಿ ಪಡೆದುಕೊಂಡಿದೆ.

 

Kishor KV

Leave a Reply

Your email address will not be published. Required fields are marked *