ಕರ್ನಾಟಕ ಆಯ್ತು.. ಈಗ ಈ ರಾಜ್ಯದಲ್ಲೂ ಸೋಶಿಯಲ್ ಮೀಡಿಯಾ ಬ್ಯಾನ್!

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಭಾಷಣದ ವೇಳೆ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇದೀಗ ಮತ್ತೊಂದು ರಾಜ್ಯದಲ್ಲೂ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧ ಮಾಡಲಾಗಿದೆ.
ಇದನ್ನೂ ಓದಿ: ಬಿಗ್ಬಾಸ್ ಸ್ಪರ್ಧಿ ವಿರುದ್ಧ ಕೇಸ್ ದಾಖಲು! – ಈ ಸಲ ಡಾಗ್ ಸತೀಶ್ ಎಡವಟ್ಟೇನು?
ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು, 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಬಂದಿರುವ ಸಲಹೆಗಳನ್ನು ನಾವು ಸ್ವೀಕರಿಸಿದ್ದೇವೆ. ಖಂಡಿತವಾಗಿಯೂ, ಮುಂಬರುವ 90 ದಿನಗಳಲ್ಲಿ ಇದನ್ನೂ ನಾವು ಜಾರಿಗೆ ತರುತ್ತೇವೆ ಎಂದಿದ್ದಾರೆ.
ಸಾಮಾಜಿಕ ಜಾಲತಾಣ ನಿಷೇಧ 13 ವರ್ಷ ಅಥವಾ 16 ವರ್ಷವಾಗಿರಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲರೂ ಒಪ್ಪಿದರೆ, ಈ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ಆಂಧ್ರದಲ್ಲಿ ಸಹ ಇದೇ ಕ್ರಮಕ್ಕೆ ಅಲ್ಲಿನ ಸರ್ಕಾರ ಮುಂದಾಗಿದೆ.

ನೋಡಿರಿ

