ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಗೆ ದಾಖಲು – ರಾಹುಲ್ ಗಾಂಧಿ ಕೇರಳ ಪ್ರವಾಸ ರದ್ದು!

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.
ಇದನ್ನೂ ಓದಿ: LPG ಗ್ಯಾಸ್ ಬುಕ್ಕಿಂಗ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ! – ಕೇಂದ್ರ ಸರ್ಕಾರದಿಂದ ಸ್ಪಷ್ಟನೆ!
ಹವಾಮಾನ ಬದಲಾವಣೆಯಿಂದಾಗಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಇನ್ನು ತಾಯಿ ಅನಾರೋಗ್ಯದ ಹಿನ್ನೆಲೆ ರಾಹುಲ್ ಗಾಂಧಿ ಅವರು ಕೇರಳದ ಕೋಝಿಕ್ಕೋಡ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅವರ ಬದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆರಳಲಿದ್ದಾರೆ.
ರಾಹುಲ್ ಗಾಂಧಿ ಅವರು ಇಂದು (ಮಾ.25) ಕೇರಳದ ಕೋಝಿಕ್ಕೋಡ್‌ಗೆ ತೆರಳಬೇಕಿತ್ತು. ಅಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಪಕ್ಷವು ಸಂಜೆ 4:30ರ ಸುಮಾರಿಗೆ ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಹಮ್ಮಿಕೊಂಡಿದೆ. ಇದೀಗ ರಾಹುಲ್ ಗಾಂಧಿ ಬದಲಿಗೆ ಮಲ್ಲಿಕಾರ್ಜುನ್ ಖರ್ಗೆ ಅವರು ತೆರಳಲಿದ್ದಾರೆ.

ನೋಡಿರಿ

