ರಾಜಸ್ಥಾನದಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾದ ಸೋನಿಯಾ ಗಾಂಧಿ!

ರಾಜಸ್ಥಾನದಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾದ ಸೋನಿಯಾ ಗಾಂಧಿ!

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೇರೆ ಯಾವುದೇ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇಲ್ಲದ ಕಾರಣ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಭದ್ರಕೋಟೆಯಲ್ಲಿ ಕಮಲ ಅರಳುತ್ತಾ ಅಥವಾ ಕೈ ಮೇಲಾಗುತ್ತಾ ? – ಕರಾವಳಿಯಲ್ಲಿ ಬಿಜೆಪಿಗೆ ಭಯ ಯಾಕೆ?

ರಾಜಸ್ಥಾನದಿಂದ ಮೂರು ಸ್ಥಾನಗಳಲ್ಲಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ, ರಾಜಸ್ಥಾನ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆಯ ಚುನಾವಣಾಧಿಕಾರಿ ಶ್ರೀ ಮಹಾವೀರ ಪ್ರಸಾದ್ ಶರ್ಮಾ ಅವರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಚುನ್ನಿ ಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಿದ್ದಾರೆ.

ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಕಣದಲ್ಲಿ ಬೇರೆ ಯಾರೂ ಸ್ಪರ್ಧಿಗಳು ಇಲ್ಲದ ಕಾರಣ, ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.

Shwetha M