ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ – ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ವರಿಷ್ಠೆ

ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ – ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ವರಿಷ್ಠೆ

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿದ್ದಾರೆ. ಬುಧವಾರ ಸೋನಿಯಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ಕಾರಣದಿಂದಾಗಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಉತ್ತರಪ್ರದೇಶದ ರಾಯ್​ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸೋನಿಯಾ ಅವರು ಇದೇ ಮೊದಲ ಬಾರಿಗೆ ಸಂಸತ್ತಿನ ಮೇಲ್ಮನೆಗೆ ಅಡಿ ಇಡಲು ಮುಂದಾಗಿದ್ದಾರೆ.  ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು‌.

ಇದನ್ನೂ ಓದಿ:  ರೈತರ ಪ್ರತಿಭಟನೆಯತ್ತ ಹೊರಟ ರಾಹುಲ್‌ ಗಾಂಧಿ – 2ನೇ ಹಂತದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಸ್ಥಗಿತ!

ತೆಲಂಗಾಣ, ಕರ್ನಾಟಕದಿಂದ ಸ್ಪರ್ಧೆ ಮಾಡುವಂತೆ ಸೋನಿಯಾ ಗಾಂಧಿ ಅವರಿಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದರೆ ಈಗಾಗಲೇ ರಾಹುಲ್ ಗಾಂಧಿ ಕೇರಳದ ವಯನಾಡ್‌ನಿಂದ ಸಂಸದರಾಗಿರುವ ಹಿನ್ನೆಲೆ ಉತ್ತರ ಭಾರತವನ್ನು ಪ್ರತಿನಿಧಿಸುವ ದೃಷ್ಠಿಯಿಂದ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಸೋನಿಯಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸೋನಿಯಾ ಗಾಂಧಿ ಅವರು ರಾಜಸ್ಥಾನವನ್ನು ತಮ್ಮ ರಾಜ್ಯಸಭಾ ಕ್ಷೇತ್ರವನ್ನಾಗಿ ಆಯ್ಕೆ ಮಾಡುವುದರಿಂದ ಪಕ್ಷದ ಕಾರ್ಯಕರ್ತರು ಮತ್ತು ಜನರಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ. ಅವರು ಯಾವುದೇ ರಾಜ್ಯಕ್ಕೆ ಹೋಗಿ ರಾಜ್ಯಸಭಾ ಸದಸ್ಯೆಯಾಗಬಹುದಿತ್ತು. ಆದರೆ ಅವರು ರಾಜಸ್ಥಾನವನ್ನು ಆರಿಸಿದ್ದರೆ, ಇದು ಸೋನಿಯಾ ಗಾಂಧಿಯವರ ಆಯ್ಕೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ಎಷ್ಟು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ 1999 ರಲ್ಲಿ ಮೊದಲ ಬಾರಿಗೆ ಅವರು ಲೋಕಸಭೆಗೆ ಆಯ್ಕೆಯಾದರು. ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ಗಾಂಧಿ ಕುಟುಂಬದ ಎರಡನೇ ಸದಸ್ಯೆ ಸೋನಿಯಾ ಗಾಂಧಿಯಾಗಿದ್ದಾರೆ. ಇದಕ್ಕೂ ಮೊದಲು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಇಂದಿರಾ ಗಾಂಧಿ ರಾಜ್ಯಸಭೆಯಲ್ಲಿದ್ದರು.

Shwetha M