ರೀಲ್ಸ್‌ ಸ್ಟಾರ್‌ ಸೋನು ಗೌಡಗೆ ಜೈಲು ಫಿಕ್ಸಾ? – 14 ದಿನ ನ್ಯಾಯಾಂಗ ಬಂಧನ

ರೀಲ್ಸ್‌ ಸ್ಟಾರ್‌ ಸೋನು ಗೌಡಗೆ ಜೈಲು ಫಿಕ್ಸಾ? – 14 ದಿನ ನ್ಯಾಯಾಂಗ ಬಂಧನ

ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ

ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ಭಾನುವಾರ ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.

ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ಭಾನುವಾರ ಬೆಂಗಳೂರಿಗೆ ತೆರಳಿದ್ದರು.

Shwetha M