ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಹೋರಾಟದ ತೀವ್ರತೆ ಮತ್ತಷ್ಟು ಹೆಚ್ಚಾಗಿದೆ. ಇದೀಗ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಪೋರ್ಚುಗಲ್‌ ಪ್ರಧಾನಿ ಆಂಟೋನಿಯೊ ಕೋಸ್ಟಾ ರಾಜೀನಾಮೆ

ಅಕ್ಟೋಬರ್ 10, 2012ರಂದು ನೇತ್ರಾವತಿ ಮಣ್ಣ ಸಂಕ ಎಂಬಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಸುಧೀರ್ಘ 11 ವರ್ಷಗಳ ವಿಚಾರಣೆ ಬಳಿಕ ಸಿಬಿಐ ವಿಶೇಷ ಕೋರ್ಟ್ ಕಳೆದ ಜೂನ್ 16ರಂದು ತೀರ್ಪು ನೀಡಿತ್ತು. ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದು, ಆತನನ್ನು ನಿರಾಪರಾಧಿ ಎಂದು ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಸಿಬಿಐಗೆ ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಸಿಬಿಐ ವಿಶೇಷ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮರು ಪರಿಶೀಲನೆ ಮಾಡುವಂತೆ ಮೇಲ್ಮನವಿ ಸಲ್ಲಿಸಲಾಗಿದೆ.

ಸೌಜನ್ಯಾ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ವಿರುದ್ದ ಆರೋಪ ಸಾಬೀತು ಪಡಿಸಲು ವಿಫಲ ಎಂದು ಹೇಳಿದ್ದ ಬೆಂಗಳೂರು ಸಿಬಿಐ ಕೋರ್ಟ್, ಸಂತೋಷ್‌ರಾವ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು. ಹೀಗಾಗಿ ಸಂತೋಷ್ ರಾವ್ ನಿರಾಪರಾಧಿ ಎಂದು ಬಿಡುಗಡೆಯಾಗಿದ್ದನು. ಇದೀಗ ಮತ್ತೆ  ಸೌಜನ್ಯಾಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿ ಸಂತೋಷ್‌ರಾವ್‌. ಮತ್ತೆ ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಸಿಬಿಐ ಮೇಲ್ಮನವಿಯಲ್ಲಿ ಹೇಳಿದೆ ಎಂದು ವರದಿಯಾಗಿದೆ.

Shwetha M