ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಕಾನೂನು ಪ್ರಕಾರ ಮುಂದಿನ ನಿರ್ಧಾರ ಎಂದ ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಕಾನೂನು ಪ್ರಕಾರ ಮುಂದಿನ ನಿರ್ಧಾರ ಎಂದ ಸಿಎಂ ಸಿದ್ದರಾಮಯ್ಯ

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಮಂಗಳವಾರ ಮಳೆ ಹಾನಿ, ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಕುರಿತು ಮಾತನಾಡಿದ್ದಾರೆ. ಸೌಜನ್ಯ ಪೋಷಕರು ಮತ್ತು ಇನ್ನೂ ಕೆಲವರು ಅದರ ಮರುತನಿಖೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾನೂನು ಪ್ರಕಾರ ಮುಂದೆ ಏನು ಕ್ರಮ ಕೈಗೊಳ್ಳಬಹುದೆಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ  ಸಿಎಂ ಸಿದ್ದರಾಮಯ್ಯ ಅವರು, ಸೌಜನ್ಯ ಕೇಸ್ ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ ಕೊಲೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಅದು ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ.  ಸೌಜನ್ಯ ಪೋಷಕರು ಮತ್ತು ಇನ್ನೂ ಕೆಲವರು ಅದರ ಮರುತನಿಖೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾನೂನು ಪ್ರಕಾರ ಮುಂದೆ ಏನು ಕ್ರಮ ಕೈಗೊಳ್ಳಬಹುದೆಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿ.ಟಿ ರವಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ದಿಢೀರ್ ಬುಲಾವ್ – ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಫಿಕ್ಸ್..?

ನಾನು ಮೂಲತಃ ವಕೀಲನಾಗಿ ನನಗೆ ಗೊತ್ತಿರುವ ಕಾನೂನು ಪ್ರಕಾರ ಸೌಜನ್ಯ ಪೋಷಕರು ಹೈಕೋರ್ಟ್ ಗೆ ಮನವಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೋರ್ಟ್ ಏನು ತೀರ್ಪು ಕೊಟ್ಟಿದೆ ಎಂದು ನಾನು ಓದಿಲ್ಲ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಕೋರ್ಟ್ ನೀಡಿರುವ ತೀರ್ಪನ್ನು ಆಧರಿಸಿ ಪೋಷಕರು ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಕೋರ್ಟ್ ತೀರ್ಪಿನ ಪ್ರತಿಯನ್ನು ತಂದು ನನಗೆ ನೀಡಿದ್ದಾರೆ. ಓದಿದ ನಂತರ ಅದರ ವಿರುದ್ಧವಾಗಿ ಅಪೀಲ್ ಹಾಕಲು ಅವಕಾಶವಿದೆಯೇ ಎಂದು ನೋಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಯಾರೇ ಆಗಲಿ ಸಾಮಾಜಿಕ ಜಾಲತಾಣದಲ್ಲಿ ಒಬ್ಬರ ಬಗ್ಗೆ ಸುಳ್ಳು ಸುದ್ದಿ ಹರಡಿದರೆ, ಅನಗತ್ಯ ಆರೋಪಗಳು, ಅಪಪ್ರಚಾರ, ತೇಜೋವಧೆ ಮಾಡಿದರೆ ಅದು ಸರ್ಕಾರ ವಿರುದ್ಧವಾಗಲಿ, ವ್ಯಕ್ತಿಗಳ ವಿರುದ್ಧವಾಗಲಿ ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುವುದು. ಟೀಕೆ ಮಾಡುವುದು, ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇಡ ಎಂದು ಹೇಳಿದ್ದಾರೆ.

ನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಕಾನೂನಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

suddiyaana