ಗಗನಯಾನ ಮಿಷನ್ ಪರೀಕ್ಷಾರ್ಥ ಉಡಾವಣೆ ಯಶಸ್ವಿ
ಬೆಂಗಳೂರು: ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ನಡೆಸಿದ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ನೌಕೆ ಶನಿವಾರ ಯಶಸ್ವಿಯಾಗಿ ಉಡಾವಣೆಯಾಗಿದೆ.
ತಾಂತ್ರಿಕ ದೋಷದಿಂದಾಗಿ ಮೂರು ಬಾರಿ ಮೂರು ಬಾರಿ ರಾಕೆಟ್ ಉಡಾವಣೆ ವಿಫಲವಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ನಂತರ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್ ಉಡಾವಣೆ ಮಾಡಿದೆ. ಯಶಸ್ವಿಯಾಗಿ ಹಾರಾಟ ನಡೆಸಿದ ಗಗನನೌಕೆ ಸೇಫ್ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.
ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು. ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಟಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು.
ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ – ರಾಜ್ಯ ಸರ್ಕಾರ ಆದೇಶ!
ಈ ಪರೀಕ್ಷೆಗೆ TV-D1 ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ ನಭಕ್ಕೆ ಚಿಮ್ಮಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವ ನಿರೀಕ್ಷೆ ಇಸ್ರೋ ಹೊಂದಿದೆ.
TV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್‌ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ.