ಮಂಗಳವಾರ ರಾತ್ರಿ ಬೆಂಗಳೂರಿಗೆ ಸ್ಪಂದನಾ ಪಾರ್ಥೀವ ಶರೀರ – ಬುಧವಾರ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ

ಮಂಗಳವಾರ ರಾತ್ರಿ ಬೆಂಗಳೂರಿಗೆ ಸ್ಪಂದನಾ ಪಾರ್ಥೀವ ಶರೀರ – ಬುಧವಾರ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ

ಬೆಂಗಳೂರು: ವಿಜಯ್‌ ರಾಘವೇಂದ್ರ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ. ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಮೂರು ದಿನಗಳ ಹಿಂದೆ ಕುಟುಂಬಸ್ಥರು ಮತ್ತು ಸ್ನೇಹಿತರ ಜೊತೆ ಸ್ಪಂದನಾ ಅವರು ಬ್ಯಾಂಕಾಕ್‌ಗೆ ತೆರಳಿದ್ದರು. ಸೋಮವಾರ ಬೆಳಗ್ಗೆ ಮಲಗಿದ್ದಾಗಲೇ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಗಾಗಲೇ ಸ್ಪಂದನಾ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಅವರ ಪಾರ್ಥಿವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಸಾಧ್ಯತೆ ಇದೆ. 12 ಗಂಟೆ ವೇಳೆಗೆ ಮಲ್ಲೇಶ್ವರಂನಲ್ಲಿರುವ ಮನೆಗೆ ತಲುಪಲಿದೆ. ಬಳಿಕ ಮನೆಯ ಬಳಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬುಧವಾರ ಮಧ್ಯಾಹ್ನದವರೆಗೂ ಅಂತಿಮ ದರ್ಶನ ನಡೆಯಲಿದೆ.

ಇದನ್ನೂ ಓದಿ: ಸ್ಪಂದನಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್‌ ಅರ್ಧಕ್ಕೆ ನಿಲ್ಲಿಸಿ ಬೆಂಗಳೂರಿಗೆ ಆಗಮಿಸಿದ ಶಿವಣ್ಣ

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ಸ್ಪಂದನಾ ಅವರ ಪೊಸ್ಟ್ ಮಾರ್ಟಂ ಮುಗಿದಿದೆ. ಥೈಲಾಂಟ್​ನಲ್ಲಿ ಒಂದು ಘಂಟೆಗೆ ಪ್ರೊಸಿಜರ್ ಮುಗಿಯಲಿದೆ. ಸಂಜೆ ಥೈ ಏರ್​ಲೈನ್ಸ್​ನಲ್ಲಿ ಮೃತದೇಹ ತರಲಾಗ್ತಿದೆ. ರಾತ್ರಿ 11 ರ ವೇಳೆಗೆ ಮೃತದೇಹ ಬೆಂಗಳೂರು ಏರ್ಪರ್ಟ್​ಗೆ ಬರಲಿದೆ. ರಾತ್ರಿಯಿಂದ ಬುಧವಾರ ಮಧ್ಯಾಹ್ನದವರೆಗೂ ಮಲ್ಲೇಶ್ವರಂ ರಲ್ಲಿ ಅಂತಿಮನಮನಕ್ಕೆ ಅವಕಾಶ ನೀಡಲಾಗಿದೆ. ಬುಧವಾರ ಮಧ್ಯಾಹ್ನ ಶ್ರೀರಾಂಪುರ ಹರಿಶ್ಚಂದ್ರ ಘಾಟ್​ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

suddiyaana