ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ – ಪಾರ್ಥೀವ ಶರೀರ ಬೆಂಗಳೂರಿಗೆ ತರಲು ಸಿದ್ಧತೆ

ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ – ಪಾರ್ಥೀವ ಶರೀರ ಬೆಂಗಳೂರಿಗೆ ತರಲು ಸಿದ್ಧತೆ

ಸ್ಯಾಂಡಲ್‌ ಪುಡ್‌ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದೆ ಎಂದು ವರದಿಯಾಗಿದೆ.

ಸ್ಪಂದನಾ ಅವರು ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದೀಗ ಅವರ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಬರುತ್ತಿದ್ದಂತೆಯೇ ಮುಂದಿನ ಪ್ರಕ್ರಿಯೆಗಳು ಚುರುಕುಗೊಂಡಿದ್ದರಿಂದ ಇದೀಗ ಸ್ಪಂದನಾ ಅವರ ಮೃತದೇಹವನ್ನು ಬೆಂಗಳೂರಿಗೆ ತರುವ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಸ್ಪಂದನಾ ವಿಧಿವಶ – ಮಲ್ಲೇಶ್ವರಂನ ಬಿ.ಕೆ.ಶಿವರಾಂ ಮನೆ ಬಳಿ ದೇವಸ್ಥಾನಗಳು ಬಂದ್!

ರಾತ್ರಿ 8.30ರ ಹೊತ್ತಿಗೆ ಮೃತದೇಹ ಹೊತ್ತ ವಿಮಾನ ಬ್ಯಾಂಕಾಕ್ ನಿಂದ ಹೊರಟರೆ, ಬೆಂಗಳೂರಿಗೆ 11.15ಕ್ಕೆ ವಿಮಾನ ಆಗಮನವಾಗಲಿದೆ. ಬೆಂಗಳೂರಿನಲ್ಲೂ ಅಂತಿಮ ದರ್ಶನಕ್ಕೆ ಸ್ಪಂದನಾ ಅವರ ತವರು ಮನೆಯಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಲ್ಲೇಶ್ವರಂ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬುಧವಾರ ಮಧ್ಯಾಹ್ನದವರೆಗೂ ಅಂತಿಮ ದರ್ಶನ ಮಾಡಬಹುದಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

suddiyaana