ಮಹಿಳಾ ದಿನಾಚರಣೆಗೆ ವಿಶೇಷ ಉಡುಗೊರೆ – ಬಿಎಂಟಿಸಿವತಿಯಿಂದ ಉಚಿತ ಪ್ರಯಾಣ

ಮಹಿಳಾ ದಿನಾಚರಣೆಗೆ ವಿಶೇಷ ಉಡುಗೊರೆ – ಬಿಎಂಟಿಸಿವತಿಯಿಂದ ಉಚಿತ ಪ್ರಯಾಣ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬಿಎಂಟಿಸಿ ವತಿಯಿಂದ ವಿಶೇಷ ಉಡುಗೊರೆ ನೀಡಲಾಗಿದೆ. ಮಾರ್ಚ್ 7 ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಬುಧವಾರ ಮಧ್ಯರಾತ್ರಿ 12 ಗಂಟೆಯವರೆಗೂ ಬಿಎಂಟಿಸಿ ಬಸ್‌ಗಳಲ್ಲಿ ಸಂಪೂರ್ಣ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಬಿಎಂಟಿಸಿಯ ಎಲ್ಲಾ ಮಾದರಿಯ ಬಸ್‌ಗಳಲ್ಲಿಯೂ ಬುಧವಾರ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶವಿದೆ. ಎಸಿ, ವೋಲ್ವೊ ವಜ್ರ, ವಾಯುವಜ್ರ ಬಸ್‌ಗಳಲ್ಲಿಯೂ ಉಚಿತವಾಗಿಯೇ ಸಂಚರಿಸಬಹುದು. ಯಾವುದೇ ದಾಖಲಾತಿ, ಗುರುತಿನ ಚೀಟಿಯೂ ಅವಶ್ಯಕತೆ ಇಲ್ಲ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೇಲ್ ಸಿಗ್ತಿದ್ದಂತೆ ಬಿಲದಿಂದ ಹೊರಬಂದ ಬಿಜೆಪಿ ಶಾಸಕ – ಬೆಂಬಲಿಗರೊಂದಿಗೆ ಮಾಡಾಳ್ ಮೆರವಣಿಗೆ..!

ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಬಿಎಂಟಿಸಿ ವ್ಯಸ್ಥಾಪಕ ನಿದೇಶಕಿ ಸತ್ಯವತಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದರಂತೆ ಸರ್ಕಾರವು ಒಪ್ಪಿಗೆ ನೀಡಿದ್ದು, ಮಹಿಳೆಯರಿಗೆ ಒಂದು ದಿನದ ಮಟ್ಟಿಗೆ ಉಚಿತ ಪ್ರಯಾಣ ಸೌಲಭ್ಯ ಸಿಗಲಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ನಿತ್ಯ ಸರಾಸರಿ ಹತ್ತು ಲಕ್ಷ ಮಹಿಳಾ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಮಹಿಳೆಯರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಹಾಗೂ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿ ಭಾಗವಹಿಸಲು ಸುರಕ್ಷಿತ, ಉತ್ತಮ ಭದ್ರತೆಯುಳ್ಳ ಸಾರಿಗೆ ಸೌಲಭ್ಯ ಕಲ್ಪಿಸಲು ಹಾಗೂ ಆರ್ಥಿಕವಾಗಿ ಶಕ್ತಿಯನ್ನು ತುಂಬಲು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ.

suddiyaana