ಡಿಕೆಶಿ ಹುಟ್ಟುಹಬ್ಬಕ್ಕೆ ಪುತ್ರಿ ಐಶ್ವರ್ಯಾರಿಂದ ಸ್ಪೆಷಲ್ ಗಿಫ್ಟ್ – ಅಭಿಮಾನಿಗಳಿಂದ ಕೇಕ್ ಕತ್ತರಿಸಿ ಸಂಭ್ರಮ!
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಚಂಡ ಗೆಲುವು ಸಾಧಿಸಿದ್ದರೂ ಕೂಡ ಸಿಎಂ ಆಯ್ಕೆ ವಿಚಾರವೇ ಕಗ್ಗಂಟಾಗಿದೆ. ಈಗಾಗಲೇ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ತಮಗೇ ಸಿಎಂ ಪಟ್ಟ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ರಾಜ್ಯದಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದು ಅಂತಿಮ ನಿರ್ಧಾರ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ಇವತ್ತು ಹುಟ್ಟುಹಬ್ಬದ ಸಂಭ್ರಮ. ಪುತ್ರಿ ಐಶ್ವರ್ಯಾ, ನಾಯಕರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಜನ ವಿಶ್ ಮಾಡುತ್ತಿದ್ದಾರೆ.
ಇದನ್ನೂ ಓದಿ : ಇಂದು ರಾತ್ರಿಯೊಳಗೆ ಮುಖ್ಯಮಂತ್ರಿ ಆಯ್ಕೆ – ಯಾರಿಗೆ ಸಿಗಲಿದೆ ಸಿಎಂ ಪಟ್ಟ?
ಡಿ.ಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಡಿಕೆಶಿ ಅವರನ್ನೇ ಸಿಎಂ ಮಾಡಬೇಕೆಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಕಾರ್ಯಕರ್ತರು ಆಯೋಜನೆ ಮಾಡಿದ್ದ ಬರ್ತ್ ಡೇ ಕಾರ್ಯಕ್ರಮಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕೇಕ್ ಕತ್ತರಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ಮಗಳು ಐಶ್ವರ್ಯಾ, ತಂದೆಗೆ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ತಮ್ಮ ಮದುವೆ ಸಂದರ್ಭದಲ್ಲಿ ಅಪ್ಪಾ ಐ ಲವ್ ಯು ಹಾಡಿಗೆ ಹೆಜ್ಜೆ ಹಾಕಿದ್ದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಡಿಕೆ ಶಿವಕುಮಾರ್ ಅಂದು ಮಗಳ ತಮಗಾಗಿ ಮಾಡಿದ್ದ ಡ್ಯಾನ್ಸ್ ಕಂಡು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ವಿಡಿಯೋದಲ್ಲಿ ತಂದೆ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಿಎಲ್ಪಿ ಸಭೆ ಬಳಿಕ ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬರ್ತ್ ಡೇ ಆಚರಣೆಯಲ್ಲಿದ್ದರು. ಮತ್ತೊಂದೆಡೆ ಬಿಂದುಗೌಡ ಎಂಬಾಕೆ ತಮ್ಮ ರಕ್ತದಲ್ಲಿ ಡಿಕೆಶಿ ಚಿತ್ರ ಬಿಡಿಸಿ ಅಭಿಮಾನ ಮೆರೆದಿದ್ದಾರೆ.