ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ಸ್ಪೈಡರ್-ಮ್ಯಾನ್ – ಹಾಲಿವುಡ್ ಸಿನಿಮಾಗಳ ಅಬ್ಬರಕ್ಕೆ ಭಾರತೀಯ ಚಿತ್ರರಂಗ ಶೇಕ್.. ಶೇಕ್..

ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ ಸಿನಿಮಾ ವಿಶ್ವದಾದ್ಯಂತ ಅಬ್ಬರಿಸುತ್ತಿದೆ. ಅದರಲ್ಲೂ ಬಾಕ್ಸ್ಆಫೀಸ್ನಲ್ಲಿ ಸಖತ್ತಾಗಿ ಧೂಳೆಬ್ಬಿಸುತ್ತಿದೆ. ಈ ಸಿನಿಮಾ ಬಿಡುಗಡೆಯಾದ ಕೇವಲ ಐದು ದಿನಗಳಲ್ಲೇ 9,550 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿ ಹೊಸ ಮೈಲಿಗಲ್ಲು ನಿರ್ಮಿಸಿದೆ.
ಇದನ್ನೂ ಓದಿ:ಸೀನ ರಶ್ಮಿ ಸಂಸಾರ ಇನ್ಮುಂದೆ ಆನಂದ ಸಾಗರ – ಸೀನನ ಮೇಲೆ ವೀಕ್ಷಕರಿಗೆ ಸಂಶಯ..!
ಹಾಲಿವುಡ್ನ ಬಹುನಿರೀಕ್ಷಿತ ಮಾರ್ವೆಲ್ ಸಿನಿಮಾ ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ ಸಿನಿಮಾದ ಅಬ್ಬರ ಮುಂದುವರೆದಿದೆ. ಟಾಮ್ ಹಾಲೆಂಡ್ ಅಭಿನಯದ ಈ ಸಿನಿಮಾ ಬಿಡುಗಡೆಯಾದ ಕೇವಲ ಐದು ದಿನಗಳಲ್ಲೇ 9,550 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈ ಮೂಲಕ 10 ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವತ್ತ ವೇಗವಾಗಿ ಮುನ್ನಡೆಯುತ್ತಿದೆ. ಭಾರತದಲ್ಲಿ ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಐದು ದಿನಗಳಲ್ಲಿ ಭಾರತದಲ್ಲಿ ಒಟ್ಟು ಗ್ರಾಸ್ ಕಲೆಕ್ಷನ್ 336.91 ಕೋಟಿ ರೂಪಾಯಿ ದಾಖಲಾಗಿದೆ.
ಸ್ಪೈಡರ್ ಮ್ಯಾನ್ ಸಿನಿಮಾ ಮಾತ್ರ ಅಲ್ಲ. ಈಗಾಗಲೇ ಬಿಡುಗಡೆಯಾಗಿರುವ ಅಬ್ಸೆಷನ್ಸ್, ದಿ ಆಡಸ್ಸಿ ಸಿನಿಮಾಗಳು ಕೂಡಾ ಭಾರತದಲ್ಲಿ ಭರ್ಜರಿ ಪ್ರದರ್ಶನ ಕಂಡಿವೆ. ಈ ಸಿನಿಮಾಗಳು ಭಾರತೀಯ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಮೊತ್ತವನ್ನು ಗಳಿಕೆ ಮಾಡಿವೆ. ದಿ ಆಡಸ್ಸಿ ಸಿನಿಮಾ ಭಾರತದಲ್ಲಿ ದೊಡ್ಡ ಮೊತ್ತದ ಗಳಿಕೆ ಮಾಡಿದೆ. ಈಗಲೂ ಮಾಡುತ್ತಿದೆ. ಜುಲೈ ಮಧ್ಯ ಭಾಗದಲ್ಲಿ ಬಿಡುಗಡೆ ಆದ ಈ ಸಿನಿಮಾ ಈ ವರೆಗೆ ಭಾರತದಲ್ಲಿ 150 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ. ಬೆಂಗಳೂರು ಸೇರಿದಂತೆ ಕೆಲವು ನಗರಗಳ ಚಿತ್ರಮಂದಿರಗಳಲ್ಲಿ ಈಗಲೂ ಸಿನಿಮಾದ ಶೋಗಳು ಹೌಸ್ಫುಲ್ ಆಗುತ್ತಿವೆ.
ಅದರಲ್ಲೂ ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ ಸಿನಿಮಾ ಭಾರತೀಯ ಸೂಪರ್ ಸ್ಟಾರ್ ನಟರ ಹಿಟ್ ಸಿನಿಮಾಗಳ ದಾಖಲೆಯನ್ನೂ ಸಹ ಪುಡಿಗಟ್ಟಿದೆ. ಇನ್ನೂ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ಗಳಿಕೆಯಲ್ಲಿ ಇನ್ನಷ್ಟು ಹೊಸ ದಾಖಲೆ ಬರೆಯಲಿದೆ.
ಆದರೆ, ಹಾಲಿವುಡ್ ಸಿನಿಮಾಗಳ ಅಬ್ಬರಕ್ಕೆ ಭಾರತೀಯ ಚಿತ್ರರಂಗ ಶೇಕ್ ಆಗಿದೆ. ಭಾರತದಲ್ಲಿ ಹಾಲಿವುಡ್ ಚಿತ್ರಗಳ ಹವಾ ಜೋರಾಗಿದ್ದು, ಚಿತ್ರಮಂದಿರಗಳು ಹೌಸ್ಫುಲ್ ಆಗುತ್ತಿವೆ. ಅಂದರೆ, ಭಾರತದ ಸಿನಿಪ್ರೇಮಿಗಳು ಚಿತ್ರಗಳ ಕಂಟೆಂಟ್ಗಳನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಅನ್ನೋದಕ್ಕೆ ಈ ಸಿನಿಮಾಗಳೇ ಸಾಕ್ಷಿ.

ನೋಡಿರಿ
