ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ!

ಕೇರಳ ರಾಜ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವು ವಿಶ್ವ ವಿಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿದೆ. ಭಕ್ತರು ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆಯಾಗಿರುವ ಅಯ್ಯಪ್ಪ ಸ್ವಾಮಿಯನ್ನು ಕಂಡೊಡನೆ ಜೀವನವೇ ಸಾರ್ಥಕ ಎಂಬುವಷ್ಟು ನೆಮ್ಮದಿಯಾಗುತ್ತಾರೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ದೀನವಾಗಿ ಹೇಳುವ ಭಕ್ತರ ಕರೆಗೆ ಅಯ್ಯಪ್ಪ ಸ್ವಾಮಿ ಕಿವಿಗೊಡದೇ ಇರಲಾರರು ಎಂಬುವುದು ಭಕ್ತರ ನಂಬಿಕೆಯಾಗಿದೆ. ಇದೀಗ ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಶ್ರೀಲಂಕಾ ಪ್ರಜೆಗಳು ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳಬಹುದು ಎಂದು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಮನೆಯಲ್ಲಿ ಧ್ವಜಾರೋಹಣ ಮಾಡಿದ ಅಮಿತ್ ಶಾ
ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಹೇಳಿಕೆ ಬಿಡುಗಡೆಗೊಳಿಸಿದೆ. ಶ್ರೀಲಂಕಾದ ಭಕ್ತಾದಿಗಳು ಶಬರಿಮಲೆ ಅಯ್ಯಪ್ಪನನ್ನು ಪೂಜಿಸುತ್ತಾರೆ. ಅದಲ್ಲದೇ ಪ್ರತಿ ವರ್ಷ ಸುಮಾರು 15 ಸಾವಿರಕ್ಕೂ ಅಧಿಕ ಶೀಲಂಕಾ ಪ್ರಜೆಗಳು ಶಬರಿಮಲೆ ದೇಗುಲಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ಶ್ರೀಲಂಕಾ ಸರ್ಕಾರ ಶಬರಿಮಲೆ ಯಾತ್ರೆಯನ್ನು ಸರ್ಕಾರದ ಮಾನ್ಯತೆ ಪಡೆದ ಯಾತ್ರೆ ಎಂದು ಪರಿಗಣಿಸಿದೆ.
ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ವಾರ್ಷಿಕ ಮಂಡಲ ಪೂಜೆ ಉತ್ಸವವು ನವೆಂಬರ್ನಿಂದ ಡಿಸೆಂಬರ್ವರೆಗೆ ನಡೆಯುತ್ತದೆ. ಬಳಿಕ ಜನವರಿಯಲ್ಲಿ ಮಕರವಿಳಕ್ಕು ಉತ್ಸವ ನಡೆಯುತ್ತದೆ. ಈ ಅವಧಿಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ.

ನೋಡಿರಿ

