ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಬಿಗ್‌ ಟ್ವಿಸ್ಟ್‌!- ಜೀವರಾಜ್‌ಗೆ ಸುಪ್ರೀಂ ಕೋರ್ಟ್ ಶಾಕ್.. ರಾಜೇಗೌಡಗೆ ಮತ್ತೆ ಶಾಸಕ ಸ್ಥಾನ!

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಬಿಗ್‌ ಟ್ವಿಸ್ಟ್‌!- ಜೀವರಾಜ್‌ಗೆ ಸುಪ್ರೀಂ ಕೋರ್ಟ್ ಶಾಕ್.. ರಾಜೇಗೌಡಗೆ ಮತ್ತೆ ಶಾಸಕ ಸ್ಥಾನ!

ಶೃಂಗೇರಿ ಅಂಚೆ‌‌ ಮತ ಮರು ಎಣಿಕೆ ವಿವಾದ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇದೀಗ ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಶಾಸಕರಾಗಿ ಬಿಜೆಪಿ ಜೀವರಾಜ್‌ ಆಯ್ಕೆಯಾಗುವ ನಿಟ್ಟಿನಲ್ಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿದೆ. ಸುಪ್ರೀಂ ಆದೇಶದಿಂದ ರಾಜೇಗೌಡಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಇದನ್ನೂ ಓದಿ: ಕೃನಾಲ್‌ ಪಾಂಡ್ಯ ಅಲ್ಲೇ ಬಿದ್ದು ಸಾಯಬೇಕಿತ್ತು! – ಆಟಗಾರನಾಗಿ ಮಾನವೀಯತೆ ಮರೆತ CSK ಮಾಜಿ ಪ್ಲೇಯರ್!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಕಾಂಗ್ರೆಸ್​​ನ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿದ್ದು, ​​ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದೆ. ಇನ್ನೊಂದೆಡೆ ಮೊನ್ನೆ ಅಷ್ಟೇ ಮರು ಮತ ಎಣಿಕೆಯಲ್ಲಿ ಗೆದ್ದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೋಸ್ಟಲ್ ಬ್ಯಾಲೆಟ್ ವಿಚಾರವಾಗಿ ದೊಡ್ಡ ಮಟ್ಟದ ರಾಜಕೀಯ ಸಮರ ನಡೆಯುತ್ತಿದೆ. ಬಿಜೆಪಿ ಏಜೆಂಟ್‌ಗಳೇ ಮರುಎಣಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿರುವುದು ಒಂದೆಡೆಯಾದರೆ, ಈಗ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ರಾಜೇಗೌಡ ಬೆಂಬಲಿಗರಲ್ಲಿ ಹೊಸ ಉತ್ಸಾಹ ತುಂಬಿದೆ. ಮೇ 31ರಂದು ನಡೆಯಲಿರುವ ಮುಂದಿನ ವಿಚಾರಣೆಯು ಶೃಂಗೇರಿ ಕ್ಷೇತ್ರದ ಅಂತಿಮ ಶಾಸಕರು ಯಾರು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕವಾಗಲಿದೆ.

Shwetha M

Leave a Reply

Your email address will not be published. Required fields are marked *