SSLC ಹಾಗೂ PUC ಪರೀಕ್ಷೆ ದಿನಾಂಕ ಪ್ರಕಟ

SSLC ಹಾಗೂ PUC ಪರೀಕ್ಷೆ ದಿನಾಂಕ ಪ್ರಕಟ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್ 06ರ ವರೆಗೆ ನಡೆಯಲಿವೆ. SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ

ಇದನ್ನೂ ಓದಿ: ಅಡ್ಜೆಸ್ಟ್‌ಮೆಂಟ್‌ ಗಿರಾಕಿ ಇರೋ ತನಕ ನಾನು ಸಿಎಂ ಆಗಲ್ಲವೆಂದ ಯತ್ನಾಳ್!

2023-24ನೇ ಸಾಲಿನ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧುಬಂಗಾರಪ್ಪ ರಿಲೀಸ್ ಮಾಡಿದ್ದಾರೆ. ಸುದ್ದಿಗೋಷ್ಟಿ ವೇಳೆ ಸಚಿವರು ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು (SSLC Exam) ಮಾರ್ಚ್ 25 ರಿಂದ ಜೂನ್ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ವರ್ಷ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಹಾಗಂತ ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ  20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತೆ ಎಂದರು.

Sulekha