ಸೋಮವಾರದಿಂದ ಎಸ್‌ ಎಸ್‌ ಎಲ್‌ಸಿ ಪರೀಕ್ಷೆ ಆರಂಭ –  ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ!

ಸೋಮವಾರದಿಂದ ಎಸ್‌ ಎಸ್‌ ಎಲ್‌ಸಿ ಪರೀಕ್ಷೆ ಆರಂಭ –  ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ!

ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದೆ. ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಈ ಬೆನ್ನಲ್ಲೇ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ.

ಇದನ್ನೂ ಓದಿ: KKR ವಿರುದ್ಧ ಮೊದಲ ಪಂದ್ಯಕ್ಕೆ ಆರೆಂಜ್ ಆರ್ಮಿ ರೆಡಿ – SRH ಟೀಮ್‌ನ ಶಕ್ತಿಯಾರು?

ಕರ್ನಾಟಕದಲ್ಲಿ ಮಾರ್ಚ್​ 25 ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಿ ವಿತರಿಸುವಂತೆ ಶಾಲೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಏಪ್ರಿಲ್ 10ರ ವರೆಗೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ 1 ರಿಂದ 10ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೆ ಪೂರೈಕೆ ಮಾಡಬೇಕು ಎಂದು ಸರ್ಕಾರ ಸೂಷನೆ ನೀಡಿದೆ.

ಪರೀಕ್ಷೆ ಬರೆಯುವ ವೇಳೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು. ಮಕ್ಕಳ ಸುರಕ್ಷತೆ ಮತ್ತು ಉತ್ತಮ ಗುಣಮಟ್ಟದ ಆರೋಗ್ಯಕರ ಆಹಾರದ ಸ್ವಚ್ಛತೆ ಮತ್ತು ನೈರ್ಮಲ್ಯ. ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಆದ್ಯತೆ ನೀಡಬೇಕು. ಮಕ್ಕಳ ಪರೀಕ್ಷೆಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸರ್ಕಾರ ಹೇಳಿದೆ.

Shwetha M