ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು:  2023ರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಡಿಸೆಂಬರ್ 5ರಂದು ಪ್ರಕಟಿಸಿದೆ.  ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿರುವ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ.

ಮಾರ್ಚ್ 31ರಂದು ಪ್ರಥಮ ಭಾಷೆ ಪರೀಕ್ಷೆ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ), ಏಪ್ರಿಲ್ 4ರಂದು ಗಣಿತ ಪರೀಕ್ಷೆ, ಏಪ್ರಿಲ್ 6ರಂದು ದ್ವಿತೀಯ ಭಾಷೆ ಪರೀಕ್ಷೆ, ದ್ವಿತೀಯ ಭಾಷೆ-ಇಂಗ್ಲಿಷ್, ಕನ್ನಡ, ಏಪ್ರಿಲ್ 10ರಂದು ವಿಜ್ಞಾನ ಪರೀಕ್ಷೆ, ಏಪ್ರಿಲ್ 12ರಂದು ತೃತೀಯ ಭಾಷೆ ಪರೀಕ್ಷೆ, (ತೃತೀಯ ಭಾಷೆ-ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಪರೀಕ್ಷೆ ನಡೆಯಲಿದೆ.

 

suddiyaana