RCB ವಿಜಯೋತ್ಸವದ ವೇಳೆ ಕಾಲ್ತುಳಿತ – ಮೂವರು IPS ಅಧಿಕಾರಿಗಳ ಅಮಾನತು ಆದೇಶ ಅಂಗೀಕರಿಸಿದ ಕೇಂದ್ರ

RCB ವಿಜಯೋತ್ಸವದ ವೇಳೆ ಕಾಲ್ತುಳಿತ – ಮೂವರು IPS ಅಧಿಕಾರಿಗಳ ಅಮಾನತು ಆದೇಶ ಅಂಗೀಕರಿಸಿದ ಕೇಂದ್ರ

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿಯಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ರು. ಇದೀಗ ಈ ಪ್ರಕರಣ ಸಂಬಂಧ ಮೂವರು  ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಇದನ್ನೂ ಓದಿ: ಪುರುಷರನ್ನೇ ನುಂಗುತ್ತೆ ಈ ಪರ್ವತ! – ಜಗತ್ತಿಗೆ ಬೆಳ್ಳಿ ಕೊಟ್ಟವರಿಗೆ ಏನಾಗ್ತಿದೆ?

ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ರು. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.

ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.

Shwetha M