ಆಸ್ಪತ್ರೆಗೆ ದಾಖಲಾದ ಸ್ಟಾರ್ ಆಟಗಾರ ಶುಭಮನ್ ಗಿಲ್ – ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದಲ್ಲೂ ಗಿಲ್ ಆಡೋದು ಡೌಟ್?

ಆಸ್ಪತ್ರೆಗೆ ದಾಖಲಾದ ಸ್ಟಾರ್ ಆಟಗಾರ ಶುಭಮನ್ ಗಿಲ್ – ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದಲ್ಲೂ ಗಿಲ್ ಆಡೋದು ಡೌಟ್?

ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಕಂಡಿದೆ. 11 ರಂದು ಅಫ್ಘಾನಿಸ್ತಾನ ವಿರುದ್ಧ ನಡೆಯುವ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಆದರೆ, ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶುಭಮನ್ ಗಿಲ್ ಡೆಂಘೀ ಜ್ವರದಿಂದ ಬಳಲುತ್ತಿದ್ದಾರೆ. ಸದ್ಯ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್ 14ರಂದು ಪಾಕಿಸ್ತಾನ ವಿರುದ್ಧ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ.

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧ ಗೆಲುವಿನಲ್ಲಿ ವಿರಾಟ್ ಕೊಡುಗೆ – ಗೋಲ್ಡ್ ಮೆಡಲ್ ಧರಿಸಿ ಸಂಭ್ರಮಿಸಿದ ಕಿಂಗ್ ಕೊಹ್ಲಿ

ಟೀಮ್ ಇಂಡಿಯಾದ ಭರವಸೆಯ ಆಟಗಾರ, ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ಲೇಟ್ಲೇಟ್ಸ್‌ ಕಡಿಮೆಯಾಗಿದ್ದು, ಅವರಿಗೆ ಇನ್ನಷ್ಟೂ ವಿಶ್ರಾಂತಿಯ ಅಗತ್ಯವೂ ಇದೆ. ಗಿಲ್ ಅವರ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗಿದ್ದರಿಂದ ಅವರು ತಂಡದೊಂದಿಗೆ ದೆಹಲಿಗೆ ಕೂಡ ತೆರಳಲಿಲ್ಲ. ಪ್ಲೇಟ್ಲೆಟ್ ಎಣಿಕೆ ಕಡಿಮೆ ಇರುವಾಗ ಪ್ರಯಾಣ ಒಳ್ಳೆಯದಲ್ಲ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅಕ್ಟೋಬರ್ 11 ರಂದು ಅಫ್ಘಾನಿಸ್ತಾನ ವಿರುದ್ಧ ನಡೆಯುವ ಪಂದ್ಯಕ್ಕೂ ವಿಶ್ರಾಂತಿ ನೀಡಲಾಗಿದೆ. ಈ ನಡುವೆ ಗಿಲ್ ಪಾಕ್ ಪಂದ್ಯಕ್ಕೂ ಗೈರಾಗಲಿದ್ದಾರೆ ಎಂಬ ಬೇಸರದ ಸಂಗತಿ ಹೊರಬಿದ್ದಿದೆ. ಅಹಮದಾಬಾದ್‌ನಲ್ಲಿ ನಡೆಯುವ ಹೈ-ವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯವನ್ನು ಗಿಲ್ ಕಳೆದುಕೊಳ್ಳುವ ಸಂಭವ ಹೆಚ್ಚಾಗಿದೆ. ಇದು ಟೀಮ್ ಇಂಡಿಯಾಕ್ಕೂ ದೊಡ್ಡ ಹೊಡೆತವಾಗಿದೆ.

ಶುಭ್ಮನ್ ಗಿಲ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ, ಅವರು ಮೊದಲ ಎಸೆತದಲ್ಲೇ ಔಟ್ ಆಗಿದ್ದರು. ಹೀಗಿದ್ದರೂ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗ ಕಿಶನ್ ಅವರೇ ಕಣಕ್ಕಿಳಿಯಲಿದ್ದಾರೆ. ರೋಹಿತ್ ಶರ್ಮಾ ಪಡೆ ದೆಹಲಿಗೆ ತಲುಪಿಯಾಗಿದೆ.

Sulekha