ಹಿರಿಯೂರು ಬಸ್ ದುರಂತ ಬೆನ್ನಲ್ಲೇ ಸರ್ಕಾರ ಅಲರ್ಟ್ – ರಾತ್ರಿ ವೇಳೆ ಬಸ್ ಸಂಚಾರ ಸ್ಟಾಪ್?

ಚಿತ್ರದುರ್ಗದಲ್ಲಿ ಭೀಕರ ಅಪಘಾತದ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬಸ್ ದುರಂತದಲ್ಲಿ 7 ಮಂದಿ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದೀಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ.
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ! – ಯುವತಿಗೆ ಕಿರುಕುಳ ನೀಡಿದ ಯುವಕರು!
ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಅದ್ರಲ್ಲೂ ರಾತ್ರಿ ವೇಳೆ ಅಪಘಾತ ಹೆಚ್ಚಾಗಿದೆ. ಇದಕ್ಕೆ ಕಾರಣ ಚಾಲಕರು ನಿದ್ರೆಯ ಮಂಪರಿನಲ್ಲಿ ವಾಹನ ಚಾಲನೆ ಮಾಡ್ತಿರೋದು. ಹೀಗಾಗಿ ಈ ನಿದ್ದೆ ಮಂಪರಿನಿಂದ ಆಗೋ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನ ನಿಲ್ಲಿಸಿ ವಿಶ್ರಾಂತಿ ಮಾಡಬೇಕು. ಅದರಲ್ಲೂ ಮಧ್ಯರಾತ್ರಿ 12ರಿಂದ 4 ಗಂಟೆವರೆಗೆ ನಾಲ್ಕು ಗಂಟೆಗಳ ಕಾಲ ನ್ಯಾಷನಲ್ ಹೈವೇಗಳ ಬೇಸ್‌ಗಳಲ್ಲಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾತ್ರಿ ಸಮಯ ಟ್ರಕ್, ಲಾರಿ, ಬಸ್ ಚಾಲಕರು ನಾಲ್ಕು ಗಂಟೆವರೆಗೂ ವಿಶ್ರಾಂತಿ ಮಾಡಿ ಆಮೇಲೆ ಚಾಲನೆ ಮಾಡಲಿ. ಬಸ್‌ಗಳಲ್ಲಿ ಇಬ್ಬರು ಡ್ರೈವರ್ ಇರುತ್ತಾರೆ. ಆದರೆ, ಟ್ರಕ್ ಲಾರಿಗಳಲ್ಲಿ ಒಬ್ಬರೇ ಇರುತ್ತಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಕೊಡಲಿ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಜೊತೆಗೆ ಹಿರಿಯೂರಿನಲ್ಲಿ ನಡೆದ ಬಸ್ ದುರಂತದ ಸ್ಥಳದಲ್ಲಿ ಪದೇ ಪದೇ ಆಕ್ಸಿಡೆಂಟ್‌ಗಳು ಆಗುತ್ತಿದ್ದು, ಈ ಬಗ್ಗೆ ಕೇಂದ್ರ ಗಮನಹರಿಸಬೇಕೆಂದು ತಿಳಿಸಿದ್ದಾರೆ.

ನೋಡಿರಿ

