ಪ್ರಧಾನಿ ಅಭ್ಯರ್ಥಿಗೆ ಮದುವೆಯಾಗಿರಬೇಕು.. ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಇರುವುದು ತಪ್ಪು!

ಪ್ರಧಾನಿ ಅಭ್ಯರ್ಥಿಗೆ ಮದುವೆಯಾಗಿರಬೇಕು.. ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಇರುವುದು ತಪ್ಪು!

ನವದೆಹಲಿ: ಮುಂಬರುವ 2024 ರ ಲೋಕಸಭಾ ಚುನಾವಣೆಗೆ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಒಟ್ಟಾಗುತ್ತಿವೆ. ಈ ಮಧ್ಯೆ  ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್  ಮುಂದಿನ ಪ್ರಧಾನಿ ‘ಪತ್ನಿ ಇಲ್ಲದೆ ಇರಬಾರದು’ ಎಂದು ರಾಹುಲ್‌ ಕಾಲೆಳೆದಿದ್ದಾರೆ.

ಇದನ್ನೂ ಓದಿ: ವಿಧಾನಸಭೆ ಅಧಿವೇಶನದಲ್ಲಿ ‘ಪೆನ್‌ಡ್ರೈವ್’ ಕದನ – ಪ್ರತಿಪಕ್ಷಗಳ ಗಲಾಟೆಗೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಬಗ್ಗೆ ಮತ್ತು ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮದುವೆಯಾಗಲು ತಾವು ನೀಡಿದ ಸಲಹೆಯ ಬಗ್ಗೆ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆರ್‌ಜೆಡಿ ಮುಖ್ಯಸ್ಥ, ಯಾರೇ ಪ್ರಧಾನಿಯಾದರೂ ಅವರಿಗೆ ಪತ್ನಿ ಇರಬೇಕು. ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಇರುವುದು ತಪ್ಪು. ಇದನ್ನು ಸರಿಪಡಿಸಬೇಕು ಎಂದು ಹೇಳಿದ್ದಾರೆ.

ಜೂನ್ 23 ರಂದು ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಲಾಲು ಪ್ರಸಾದ್ ಯಾದವ್ ಅವರು ಮದುವೆಗೆ ನಿರಾಕರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮದುವೆಯಾಗುವಂತೆ ಸಲಹೆ ನೀಡಿದ್ದರು. ನೀವು ಮದುವೆಯಾಗಲು ನಿರಾಕರಿಸುತ್ತಿರುವುದರಿಂದ ನಿಮ್ಮ ತಾಯಿ ಚಿಂತಿತರಾಗಿದ್ದಾರೆ” ಎಂದು ಹೇಳಿದ್ದರು.

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಎಷ್ಟು ಸೀಟುಗಳು ಬರುತ್ತವೆ ಎಂಬ ಪ್ರಶ್ನೆಗೆ ಉತ್ತರಿಸಿದ ಲಾಲು, ‘ಕನಿಷ್ಠ 300’ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

suddiyaana