ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ – ಕಾರಣವೇನು ಗೊತ್ತಾ?

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ – ಕಾರಣವೇನು ಗೊತ್ತಾ?

ಬೆಂಗಳೂರು: ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾರ್ಚ್ 24 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್​​ ಹಾಕಿದೆ. ಅಲ್ಲದೇ 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಾರ್ಚ್ 24 ರಿಂದ ಸಾರಿಗೆ ನೌಕರರು  ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆನೀಡಿದ್ದರು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಎಂ.ವೆಂಕಟೇಶ್ ಎಂಬುವವರು ಪಿಐಎಲ್​ ಸಲ್ಲಿಸಿದ್ದರು. ಮಾ.20ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಏಪ್ರಿಲ್ 6ರಂದು ಮುಂದಿನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಹೈಕೋರ್ಟ್​​ಗೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಭಾಗ್ಯಗಳು ನಿಲ್ಲುವಂತಿಲ್ಲ.. ನಿಂತರೆ ಸರ್ಕಾರವೇ ಉಳಿಯುವುದಿಲ್ಲ’ – ಪತ್ರದ ಮೂಲಕ ನೋವು ಬಿಚ್ಚಿಟ್ಟ ಹೆಚ್​ಡಿಕೆ!

ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆದರೆ ಬಸ್ ಸಂಚಾರ ಸ್ಥಗಿತವಾಗುತ್ತದೆ. ಇದರಿಂದ ವಿದ್ಯಾರ್ಥಿಗಳು, ನೌಕರರು, ಪ್ರಯಾಣಿಕರಿಗೆ ತೊಂದರೆ ಉಂಟಾಗಲಿದೆ. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ. ಏಪ್ರಿಲ್ 6ರಂದು ಮುಂದಿನ ಸಭೆಯಿರುವ ಹಿನ್ನೆಲೆ‌ 3 ವಾರಗಳ ಕಾಲ ಮುಷ್ಕರಕ್ಕೆ ಮುಂದಾಗದಂತೆ ಸಿಜೆ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ.

ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು.

suddiyaana