ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಆರೋಪಿ ಸಂತೋಷ್‌ ರಾವ್‌ ಗೆ ಜಾಮೀನು

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಆರೋಪಿ ಸಂತೋಷ್‌ ರಾವ್‌ ಗೆ ಜಾಮೀನು

ಮಂಗಳೂರು: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು ಶುಕ್ರವಾರ ಪ್ರಕಟವಾಗಿದೆ. ಪ್ರಕರಣದ ಆರೋಪಿ ಸಂತೋಷ್‌ ರಾವ್‌ ದೋಷ ಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಆಗಿ 11 ವರ್ಷಗಳ ಬಳಿಕ ಶುಕ್ರವಾರ ತೀರ್ಪು ಹೊರಬಿದ್ದಿದೆ. ಪ್ರಕರಣ ಸಂಬಂಧ ಸಾಕ್ಷ್ಯಾಧಾರ ಕೊರತೆಯಿಂದಾಗಿ ಆರೋಪಿ ಸಂತೋಷ್​ ರಾವ್​ನನ್ನು ಬಿಡುಗಡೆ ಮಾಡಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಸಿ.ಬಿ. ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ, ನೆಮ್ಮದಿ ಇಳಿಕೆ, ಜನಸಾಮಾನ್ಯರ ಆತಂಕ ಏರಿಕೆ! – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

2012 ಅಕ್ಟೋಬರ್ 10 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.  ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು. ಆದರೆ ಸ್ಥಳೀಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣವನ್ನು ಸಿಬಿಐ ಗೆ ವರ್ಗಾಯಿಸಲಾಯಿತು.  ಕುಂದಾಪುರ ಮೂಲದ ಗುತ್ತಿಗೆ ಕಾರ್ಮಿಕ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಸಿಬಿಐ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಹೇಳಿದೆ.

ಈಗಾಗಲೇ ಪ್ರಕರಣ ಸಂಬಂಧ 4 ವರ್ಷ ಜೈಲು ಶಿಕ್ಷೆ ಪೂರೈಸಿರುವ ಆರೋಪಿ ಸಂತೋಷ್‌ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಒಂದು ಲಕ್ಷರೂ ರೂ. ಮೊತ್ತದ ಶ್ಯೂರಿಟಿ ಬಾಂಡ್‌, ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಇತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

suddiyaana